ಜಮ್ಮು ಕಾಶ್ಮೀರ- ಉಗ್ರರ ಗುಂಡೇಟಿಗೆ ಬಿಜೆಪಿ ನಾಯಕ ಬಲಿ

1 min read

ಜಮ್ಮು ಕಾಶ್ಮೀರ- ಉಗ್ರರ ಗುಂಡೇಟಿಗೆ ಬಿಜೆಪಿ ನಾಯಕ ಬಲಿ

ಶ್ರೀನಗರ, ಜುಲೈ 9: ಬಂಡಿಪೋರಾ ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷದ ನಾಯಕ ಮತ್ತು ಅವರ ಕುಟುಂಬ ಸದಸ್ಯರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಜಮ್ಮು-ಕಾಶ್ಮೀರದ ಬಂಡಿಪೊರ ಪ್ರದೇಶದಲ್ಲಿ ಭಯೋತ್ಪಾದಕರು ಭಾರತೀಯ ಜನತಾ ಪಕ್ಷದ ನಾಯಕ ವಾಸೀಂ ಅಹ್ಮದ್ ಬಾರಿ ಮತ್ತು ಅವರ ಕುಟುಂಬ ಸದಸ್ಯರನ್ನು ಬುಧವಾರ ಗುಂಡಿಕ್ಕಿ ಕೊಂದಿದ್ದಾರೆ. ಘಟನೆಯಲ್ಲಿ ವಾಸೀಂ ಅಹ್ಮದ್ ಜೊತೆಗೆ ಅವರ ಸಹೋದರ ಉಮರ್ ಸುಲ್ತಾನ್ ಮತ್ತು ತಂದೆ ಬಶೀರ್ ಅಹ್ಮದ್ ಕೂಡ ಹತ್ಯೆಗೀಡಾಗಿದ್ದಾರೆ.
ಬಿಜೆಪಿಯ ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದ ವಾಸೀಂ ಅಹ್ಮದ್ ಅವರು ಬಂಡಿಪೊರದಲ್ಲಿ ಅಂಗಡಿಯೊಂದನ್ನು ನಡೆಸುತ್ತಿದ್ದರು. ರಾತ್ರಿ ಸುಮಾರು ‌9 ಗಂಟೆಗೆ ವಾಸೀಂ ಅಹ್ಮದ್ ತನ್ನ ತಂದೆ ಮತ್ತು ಸಹೋದರನೊಂದಿಗೆ ಅಂಗಡಿಯಲ್ಲಿದ್ದ ಸಮಯದಲ್ಲಿ ಅಲ್ಲಿಗೆ ನುಗ್ಗಿದ ಭಯೋತ್ಪಾದಕರು ಮನಬಂದಂತೆ ಗುಂಡು ಹಾರಿಸಿದ್ದಾರೆ. ವಾಸೀಂ ಅಹ್ಮದ್ ಘಟನಾ ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಅವರ ತಂದೆ ಮ‌ತ್ತು ಸಹೋದರ ಬಂಡಿಪೊರ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟರು.‌ ಅಂಗಡಿಯ ಪಕ್ಕದಲ್ಲೇ ‌ಇರುವ ಪೊಲೀಸ್ ಠಾಣೆಯ ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದು, ತನಿಖೆ ಪ್ರಾರಂಭಿಸಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕ ದಿಲ್‌ಬಾಗ್ ಸಿಂಗ್ ತಿಳಿಸಿದ್ದಾರೆ.
ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಅವರು ಘಟನೆಯನ್ನು ಖಂಡಿಸಿದ್ದಾರೆ

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd