ಬಿಜೆಪಿ ಮುಖಂಡನ ಬರ್ಬರ ಹತ್ಯೆ
ಹೈದರಾಬಾದ್ : ಇಲ್ಲಿನ ಮೇದಕ್ ನಲ್ಲಿ ಬಿಜೆಪಿ ಮಾಜಿ ಉಪಾಧ್ಯಕ್ಷ ಮತ್ತು ಉದ್ಯಮಿ ವಿ.ಶ್ರೀನಿವಾಸ ಪ್ರಸಾದ್ ಮೃತದೇಹ ಪತ್ತೆಯಾಗಿದೆ.
ಸುಟ್ಟ ಸ್ಥಿತಿಯಲ್ಲಿ ಮೃತದೇಶ ಪತ್ತೆಯಾಗಿದ್ದು, ಇದು ಹತ್ಯೆ ಎಂದು ಶಂಕೆ ವ್ಯಕ್ತವಾಗಿದೆ.
ಮೇದಕ್ ಜಿಲ್ಲೆಯ ಎಸ್ ಪಿ ಚಂದನಾ ದೀಪ್ತಿ ನೀಡಿರುವ ಮಾಹಿತಿ ಪ್ರಕಾರ, ದುಷ್ಕರ್ಮಿಗಳು ವಿ.ಶ್ರೀನಿವಾಸ ಪ್ರಸಾದ್ ಅವರ ಕಾರಿಗೆ ಬೆಂಕಿ ಹಾಕಿದ್ದಾರೆ.
ಕಾರು ಹೊತ್ತಿ ಉರಿಯುತ್ತಿರುವುದನ್ನು ನೋಡಿ ಅಲ್ಲಿಗೆ ಹೋದಾಗ, ಅದರ ಟ್ರಂಕ್ ಮೇಲೆ ಶ್ರೀನಿವಾಸ್ ಮೃತದೇಹ ಕೂಡ ಇತ್ತು ಎಂದು ತಿಳಿಸಿದ್ದಾರೆ.
ಸದ್ಯ ಶ್ರೀನಿವಾಸ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು ಕಳಿಹಿಸಿಕೊಡಲಾಗಿದೆ. ಐಪಿಸಿ 302ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದೂ ಹೇಳಿದ್ದಾರೆ.










