ಪ್ರಧಾನಿ ಮೋದಿ ಜನ್ಮದಿನ : ಶುಭಕೋರಿದ ರಾಜ್ಯದ ನಾಯಕರು
ಬೆಂಗಳೂರು : ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ. ಈ ಹಿನ್ನೆಲೆ ರಾಜ್ಯ ಬಿಜೆಪಿ ನಾಯಕರು ಟ್ವೀಟ್ ಮೂಲಕ ಪ್ರಧಾನಿಗಳಿಗೆ ಹುಟ್ಟುಹಬ್ಬದ ಶುಭಕೋರುತ್ತಿದ್ದಾರೆ.
ಸ್ವಾತಂತ್ರ್ಯದ ನಂತರ ಭಾರತಕ್ಕೆ ದೊರೆತ ಒಬ್ಬ ದಿಟ್ಟ ಸ್ಪಷ್ಟ, ಸಮರ್ಥ ನಾಯಕ, ಭಾರತವನ್ನು ಒಗ್ಗೂಡಿಸಿ ಜನರಲ್ಲಿ ರಾಷ್ಟ್ರಾಭಿಮಾನವನ್ನು ಮೂಡಿಸಿ ಹೊಸ ಭಾರತ ಕಟ್ಟಲು ಅಣಿಯಾಗಿರುವಂತಹ ನಮ್ಮೆಲ್ಲರ ನೆಚ್ಚಿನ ಪ್ರಧಾನಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀ ಅವರಿಗೆ 71 ನೇ ಜನ್ಮ ದಿನದ ಹಾರ್ದಿಕ ಶುಭಾಶಯಗಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದಾರೆ.
ಇನ್ನು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿ, ಕೋಟ್ಯಂತರ ಭಾರತೀಯರ ನೆಚ್ಚಿನ ಜನನಾಯಕ, ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಗೆ ಜನ್ಮದಿನದ ಅಭಿಮಾನ ಪೂರ್ವಕ ಶುಭಕಾಮನೆಗಳು. ದೇವರ ಆನುಗ್ರಹ ಸದಾ ಇರಲಿ” ಎಂದು ಹಾರೈಸಿದ್ದಾರೆ.
“ಭವ್ಯ ಭಾರತದ ಸರ್ವತೋಮುಖ ಅಭಿವೃದ್ಧಿಗೆ ಪಣತೊಟ್ಟು, ಹಲವಾರು ಜನಪರ ಯೋಜನೆಗಳ ಮೂಲಕ ಮನೆ ಮಾತಾಗಿರುವ ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು” ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.