ಬೆಂಗಳೂರು : ಧಾರವಾಡದಲ್ಲಿ ನಡೆದಿದ್ದ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ (Yogesh Gowda Murder Case) ಸಂಬಂಧಿಸಿದಂತೆ ಶಿವಾನಂದ ಶ್ರೀಶೈಲ ಬಿರಾದರ ಮಾಫಿ ಸಾಕ್ಷಿಯಾಗಲು ಹೈಕೋರ್ಟ್ ಸಮ್ಮತಿ ಸೂಚಿಸಿದೆ.
ಬಹುತೇಕ ಸಾಂದರ್ಭಿಕ ಸಾಕ್ಷಿಗಳಿರುವ ಹಿನ್ನೆಲೆಯಲ್ಲಿ ಮಾಫಿ ಸಾಕ್ಷಿಯಾಗಿಸಿದರೆ ತಪ್ಪಿತಸ್ಥರ ಶಿಕ್ಷೆಗೆ ಅನುಕೂಲವಾಗಲಿದೆ. ಹೀಗಾಗಿ ಸಿಆರ್ಪಿಸಿ 306ರಡಿ ಹೇಳಿಕೆ ದಾಖಲಿಸಲು ನ್ಯಾ.ಕೆ.ನಟರಾಜನ್ ಹೈಕೋರ್ಟ್ ಪೀಠದಿಂದ ಆದೇಶ ನೀಡಲಾಗಿದೆ. ಆರೋಪಿ ತಪ್ಪೊಪ್ಪಿಕೊಳ್ಳಲು ಸೆಷನ್ಸ್ ಕೋರ್ಟ್ ಅನುಮತಿ ನಿರಾಕರಿಸಿದ ಹಿನ್ನೆಲೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿತ್ತು. ಕೊಲೆ ಮಾಡಿದ ಆರೋಪಿಗೆ ಎ17 ಶಿವಾನಂದ ಬಿರಾದರ್ ಪಿಸ್ತೂಲ್ ನೀಡಿದ್ದ. ಮಾಜಿ ಸಚಿವ ವಿನಯ್ ಕುಲಕರ್ಣಿ ಈ ಕೊಲೆ ಪ್ರಕರಣದ ಪ್ರಮುಖ ಆರೋಪಿ ಆಗಿದ್ದಾರೆ.








