ಕೊಪ್ಪಳ : ರಾಜ್ಯ ವಿಧಾನ ಪರಿಷತ್ ಚುನಾವಣೆ ಮೂಲಕ ಮತ್ತೆ ವಿಧಾನಸೌಧ ಪ್ರವೇಶ ಮಾಡಬೇಕು ಎಂದು ಕನಸು ಕಂಡಿದ ಹೆಚ್, ವಿಶ್ವನಾಥ್ ಕನಸು ಭಗ್ನಗೊಂಡಿದೆ. ಹಾಗಾಗಿ ಬಿಜೆಪಿ ಬಗ್ಗೆ ಹೆಚ್. ವಿಶ್ವನಾಥ್ ಅಸಮಾಧಾನಗೊಂಡಿದ್ದಾರೆ. ಇದೀಗ ಅವರನ್ನು ಸಮಾಧಾನ ಪಡಿಸುವ ತಂತ್ರಕ್ಕೆ ಬಿಜೆಪಿ ನಾಯಕರು ಮುಂದಾಗಿದ್ದಾರೆ.
ವಿಶ್ವನಾಥ್ ಅವರಿಗೆ ಮುಂದಿನ ದಿನಗಳಲ್ಲಿ ಪಕ್ಷ ಸೂಕ್ತ ಸ್ಥಾನ ಮಾನಗಳನ್ನು ನೀಡುತ್ತದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಇಂದು ಕೊಪ್ಪಳದಲ್ಲಿ ಮಾತನಾಡಿದ ಅವರು, ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ವಿಶ್ವನಾಥ್ ಅವರ ಹೆಸರು ಪ್ರಸ್ತಾಪವಾಗಿತ್ತು. ಆದರೂ ಪಕ್ಷದ ಹೈಕಮಾಂಡ್ ಒಂದು ನಿರ್ಧಾರ ಮಾಡಿ, ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ನಾವು ಒಪ್ಪುತ್ತೇವೆ. ವಿಶ್ವನಾಥ್ ಅವರು ಪಕ್ಷವನ್ನು ನಂಬಿ ಬಂದಿದ್ದಾರೆ. ಹಾಗಾಗಿ ಅವರನ್ನು ಪಕ್ಷ ಕೈ ಬಿಡುವುದಿಲ್ಲ. ಮುಂದಿನ ದಿನಗಳಲ್ಲಿ ಅವರಿಗೆ ಸೂಕ್ತ ಸ್ಥಾನ ಮಾನಗಳನ್ನು ನೀಡಲಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.