ರಾಜ್ಯ ಸಚಿವ ಸಂಪುಟ ವಿಸ್ತರಣೆ ‘ನಾಳೆ ಬಾ’ ಎಂಬಂತಿದೆ : ಶಾಸಕ ಅಭಯ್ ಪಾಟೀಲ್
ಬೆಳಗಾವಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ‘ನಾಳೆ ಬಾ’ ಎಂಬಂತಿದೆ ಎಂದು ಬೆಳಗಾವಿ ಬಿಜೆಪಿ ಶಾಸಕ ಅಭಯ್ ಪಾಟೀಲ್ ವ್ಯಂಗ್ಯವಾಡಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಂಪುಟ ಆಗೋದಲ್ಲ, ಹೋಗೋದಲ್ಲ. ಇನ್ನೂ ನನಗೆ ಮಂತ್ರಿ ಸ್ಥಾನ ಕೊಡೋದು, ಬಿಡೋದು ಸಿಎಂ ವಿವೇಚನೆಗೆ ಬಿಟ್ಟಿದ್ದು ಎಂದು ತಿಳಿಸಿದರು.
ಹಾಗೇ ರಾಜ್ಯಕ್ಕೆ ಕೇಂದ್ರ ಸಚಿವ ಅಮಿತ್ ಶಾ ಆಗಮಿಸಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಔತಣಕೂಟ ಏರ್ಪಡಿಸಿದ್ದರು. ಔತಣಕೂಟಕ್ಕೆ ಶಾಸಕರು ಮತ್ತು ಸಚಿವರನ್ನು ಕರೆದಿದ್ದರು. ಇದಕ್ಕೆ ಪ್ರತಿಕ್ರಿಸಿಯಿಸಿದ ಅವರು ಶಾಸಕ ಅಭಯ್ ಪಾಟೀಲ್‌ಗೆ ಸಿಎಂ ಬುಲಾವ್ ಅನ್ನೋದು ತಪ್ಪು. ಎಲ್ಲ ಶಾಸಕರಿಗೂ ಊಟಕ್ಕೆ ಕರೆದಿದ್ದರು. ಹೀಗಾಗಿ ಊಟ ಮಾಡಿ ಬಂದಿದ್ದೇವೆ. ಮೂರು ಸ್ವೀಟ್, ರೊಟ್ಟಿ ಜೊತೆ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕದ ಊಟ ಇತ್ತು ಎಂದು ಸ್ಪಷ್ಟನೆ ಕೊಟ್ಟರು.
ಇನ್ನೂ ನಮ್ಮ ಸರ್ಕಾರ ಬೆಳಗಾವಿ ಜಿಲ್ಲಾ ಕೇಂದ್ರಕ್ಕೆ ಅಭಿವೃದ್ಧಿ ವಿಷಯದಲ್ಲಿ ಪ್ರಾಮುಖ್ಯತೆ ನೀಡಿದೆ. ಔತಣಕೂಟದಲ್ಲಿ ಸಿಎಂ ಬದಲಾವಣೆ ಬಗ್ಗೆ ಚರ್ಚೆ ನಮ್ಮ ಗಮನಕ್ಕೆ ಬಂದಿಲ್ಲ. ಸಭೆಯಲ್ಲಿ ಆ ರೀತಿಯ ಯಾವುದೇ ಚರ್ಚೆ ನಡೆದಿಲ್ಲ ಎಂದರು.
ರಾಜ್ಯದಲ್ಲಿ ಸಚಿವ ಸಂಪುಟದ ಕಾವು ತಾರಕಕ್ಕೆ ಏರಿದ್ದು, ಅಮಿತ್ ಶಾ ಬಂದು ಹೋದ ಮೇಲಂತು ಈ ಕಾವು ಇನ್ನೂ ಜೋರಾಗಿದೆ. ಸಂಪುಟ ವಿಸ್ತರಣೆ ಸದ್ಯದಲ್ಲೇ ಆಗುತ್ತದೆ ಎಂಬ ಮಾತು ಕೇಳಿ ಬುರುತ್ತಿದೆ. ಈ ಮಧ್ಯೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇನ್ನೂ 2-3 ದಿನಗಳಲ್ಲಿ ಸಂಪುಟ ವಿಸ್ತರಣೆ ಆಗಬಹುದು ಎಂದು ಹೇಳಿದ್ದಾರೆ.