ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದಾರೆ ಎಂಬ ಕಾರಣಕ್ಕೆ ಬಿಜೆಪಿ ವಿಪ ಸದಸ್ಯ ಸಿ.ಟಿ. ರವಿ ವಿರುದ್ಧ ಎಫ್ ಐಆರ್ ದಾಖಲಾಗಿದ್ದು, ಪೊಲೀಸರು ಅರೆಸ್ಟ್ ಮಾಡಿದ್ದಾರೆ,.
ಅಶ್ಲೀಲ ಪದ ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಎಂಎಲ್‌ಸಿ ಸಿ.ಟಿ.ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಎಫ್ ಐಆರ್ ದಾಖಲಾದ ಬೆನ್ನಲ್ಲೇ ಸಿ.ಟಿ.ರವಿ ಅವರನ್ನು ಬಂಧಿಸಿದ ಹಿರೇಬಾಗೇವಾಡಿ ಪೊಲೀಸರು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಬಂಧನ ಖಂಡಿಸಿ ಪೊಲೀಸ್ ವ್ಯಾನ್ ಹತ್ತಿ ಬಿಜೆಪಿ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.








