ಸಣ್ಣನೀರಾವರಿ ಇಲಾಖೆಯ ಕಾಮಗಾರಿ ಗುತ್ತಿಗೆ ನೀಡುವ ವಿಚಾರದಲ್ಲಿ ₹5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಬಿಜೆಪಿ ಶಾಸಕ ಚಂದ್ರು ಲಮಾಣಿ ಸೇರಿದಂತೆ ಮೂವರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.
ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಅವರ ಸಹಾಯಕರು (PA) ಮಂಜುನಾಥ್ ಮತ್ತು ಗುರು ಕೂಡ ಈ ದಾಳಿಯಲ್ಲಿ ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ. ರಸ್ತೆ ಬದಿ ತಡೆಗೋಡೆ ನಿರ್ಮಾಣ ಕಾಮಗಾರಿ ನೀಡಲು ಗುತ್ತಿಗೆದಾರ ವಿಜಯ್ ಅವರಿಂದ ₹10 ಲಕ್ಷ ಲಂಚ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ.
ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಈ ಘಟನೆ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಭ್ರಷ್ಟಾಚಾರದ ವಿರುದ್ಧ ಕಠಿಣ ಕ್ರಮ ಅಗತ್ಯ ಎಂಬ ಮಾತುಗಳು ಕೇಳಿಬರುತ್ತಿವೆ.







