ADVERTISEMENT
Thursday, November 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪುರಸಭೆ ಮಹಿಳಾ ಸದಸ್ಯರನ್ನು ಎಳೆದಾಡಿದ್ರಾ ಬಿಜೆಪಿ ಎಂಎಲ್‍ಎ ಸಿದ್ದು ಸವದಿ..!

Kariyappa N by Kariyappa N
November 11, 2020
in Newsbeat, Politics, Samagra karnataka, ರಾಜ್ಯ
mla halle
Share on FacebookShare on TwitterShare on WhatsappShare on Telegram

ಬಾಗಲಕೋಟೆ: ಬಾಗಲಕೋಟೆ ಪುರಸಭೆಯ ಅಧ್ಯಕ್ಷ ಸ್ಥಾನ ಚುನಾವಣೆ ವೇಳೆ ತೆರೆದಾಳ ಬಿಜೆಪಿ ಶಾಸಕ ಸಿದ್ದು ಸವದಿ ಮಹಿಳಾ ಸದಸ್ಯೆಯೊಬ್ಬರನ್ನು ಎಳೆದಾಡಿ ಅಸಭ್ಯ ವರ್ತನೆ ತೋರಿದ ಆರೋಪ ಕೇಳಿ ಬಂದಿದೆ.
ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿತ್ತು. ಈ ವೇಳೆ ಅಧ್ಯಕ್ಷೆ ಸ್ಥಾನದ ಆಕಾಂಕ್ಷಿ ಸವಿತಾ ಹುರಕಡ್ಲಿ ಅವರನ್ನು ಶಾಸಕ ಸಿದ್ದು ಸವದಿ ಎಳೆದಾಡಿದ್ದು, ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಬಿಜೆಪಿ ಸದಸ್ಯೆ ಸವಿತಾ ಹುರಕಡ್ಲಿ ಕಾಂಗ್ರೆಸ್ ಗೆ ಬೆಂಬಲಿಸಲು ಮುಂದಾದಾಗ ಶಾಸಕ ಸಿದ್ದು ಸವದಿ, ಅವರನ್ನು ತಳ್ಳಾಡಿ ಅಸಭ್ಯ ವರ್ತನೆ ತೋರಿದ್ದಾರೆಂದು ಹೇಳಲಾಗುತ್ತಿದೆ. ನೂಕಾಟದ ಮಧ್ಯೆ ಮಹಿಳಾ ಸದಸ್ಯೆ ಕೆಳಕ್ಕೆ ಬಿದ್ದಿದ್ದು, ಶಾಸಕರ ಈ ವರ್ತನೆಗೆ ಆಕ್ರೋಶ ವ್ಯಕ್ತವಾಗಿದೆ.

savadi siddu
ಈ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿದ್ದು ಸವದಿ, ಮಹಿಳೆಯರ ಬಗ್ಗೆ ಗೌರವವಿದೆ. ಮಹಿಳಾ ಸದಸ್ಯರನ್ನು ಎಳೆದಾಡಿ, ಅಸಭ್ಯ ವರ್ತನೆ ನಡೆಸಿಲ್ಲ. ಬಹುಮತವಿರುವ ಬಿಜೆಪಿ ಸದಸ್ಯರು ನಮ್ಮವರು, ವಿನಾಕಾರಣ ಅವರಿಗೆ ಆಮಿಷವೊಡ್ಡಿ ಕಿಡ್ನಾಪ್ ಮಾಡುವ ನೀಚ ರಾಜಕಾರಣವನ್ನು ಕಾಂಗ್ರೆಸ್ ನಡೆಸುತ್ತಿದೆ. ಹಕ್ಕು ಮಂಡನೆಗೆ ಅವಕಾಶ ನೀಡಿಲ್ಲವೆಂದು ಮಾಜಿ ಸಚಿವೆ ಉಮಾಶ್ರೀ ನೀಡಿರುವ ಹೇಳಿಕೆ ಶುದ್ಧ ಸುಳ್ಳು. ಅಂತಹ ಕೀಳುಮಟ್ಟದ ರಾಜಕೀಯ ನಡೆಸುವ ಸಂಸ್ಕøತಿ ಬಿಜೆಪಿಯಲ್ಲಿ ಇಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.
ಮಹಾಲಿಂಗಪುರ ಪುರಸಭೆಯಲ್ಲಿ ಬಹುಮತವಿದ್ದರೂ ಕಾಂಗ್ರೆಸ್ ವಾಮಮಾರ್ಗದಿಂದ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಪಡೆಯಬೇಕೆಂಬ ಹುನ್ನಾರ ನಡೆಸಿರುವುದು ಜನತೆಗೆ ಅರಿವಾಗಿದೆ. ರಾತ್ರೋರಾತ್ರಿ ಸದಸ್ಯರನ್ನು ಕಿಡ್ನಾಪ್ ಮಾಡಿದ್ದಲ್ಲದೆ, ಉಮಾಶ್ರೀಯವರೇ ಮಹಿಳೆಯರ ಮೇಲೆ ಅಗೌರವ ತರುವ ರೀತಿಯಲ್ಲಿ ವರ್ತನೆ ನಡೆಸಿದ್ದಾರೆಂದು ಸವದಿ ಆರೋಪಿಸಿದ್ದಾರೆ.

Related posts

darshan-puttannaiah-solar-powered-organic-jaggery-units-sunkathonur-mandya

ಸಾವಯವ ಕೃಷಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮತ್ತೊಂದು ಬಲವಾದ ಹೆಜ್ಜೆ

November 18, 2026
melukote-darshan-puttannaiah-agriculture-dairy-farming-beneficiary-distribution-program

ಮೇಲುಕೋಟೆಯಲ್ಲಿ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಕೃಷಿ-ಹೈನುಗಾರಿಕೆಗೆ ಹೊಸ ಚೈತನ್ಯ

November 18, 2026

ಬಿಜೆಪಿ ನಾಯಕರಿಗೆ ನಿಯಂತ್ರಣವೇ ಇಲ್ಲದಂತಾಗಿದೆ: ಡಿ.ಕೆ ಶಿವಕುಮಾರ್
ರಾಜ್ಯದಲ್ಲಿ ಬಿಜೆಪಿ ನಾಯಕರಿಗೆ ಯಾರ ನಿಯಂತ್ರಣವೂ ಇಲ್ಲದಂತಾಗಿದ್ದು, ತಾವು ಏನು ಮಾಡಿದರೂ ನಡೆಯುತ್ತದೆ ಎಂಬ ಮನಸ್ಥಿತಿಗೆ ಬಂದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟೀಕಿಸಿದ್ದಾರೆ.


ತೇರದಾಳ ಶಾಸಕ ಸಿದ್ದು ಸವದಿ ಹಾಗೂ ಅವರ ಬೆಂಬಲಿಗರು ಪುರಸಭೆ ಕಾಂಗ್ರೆಸ್ ಸದಸ್ಯೆ ಸವಿತಾ ಹುರಕಡ್ಲಿ ಅವರ ಮೇಲೆ ಹಲ್ಲೆ ನಡೆಸಿರುವ ವಿಚಾರವಾಗಿ ಮಾತನಾಡಿರುವ ಡಿಕೆಶಿ, ‘ಇದು ಬಿಜೆಪಿಯ ಸಂಸ್ಕøತಿ. ಬಿಜೆಪಿ ನಾಯಕರು ಯಾರಿಗೆ ಏನು ಬೇಕಾದರೂ ಮಾಡಬಹುದು ಎಂಬ ಹವ್ಯಾಸ ಹಾಗೂ ಅಭ್ಯಾಸ ಬೆಳೆಯುತ್ತಿದೆ. ಬಿಜೆಪಿಯ ಯಾವುದೇ ಶಾಸಕರು, ನಾಯಕರಿಗೆ ನಿಯಂತ್ರಣವೇ ಇಲ್ಲದಂತಾಗಿದೆ. ಕಾಪೆರ್Çರೇಟರ್ ನಿಂದ ಕೌನ್ಸಲರ್ ವರೆಗೂ ಎಲ್ಲೆಡೆ ಇಂತಹ ಘಟನೆ ನಡೆಯುತ್ತಿದೆ. ಬೇರೆ ಸಮಯದಲ್ಲಿ ಪೆÇಲೀಸರು ಸುಮೋಟೋ ಪ್ರಕರಣ ದಾಖಲಿಸುತ್ತಾರೆ. ಈ ಘಟನೆ ಪೆÇಲೀಸರ ಸಮ್ಮುಖದಲ್ಲೇ ಹೆಣ್ಣು ಮಕ್ಕಳ ಮೇಲೆ ಹಲ್ಲೆ ನಡೆದರೂ ಯಾವುದೇ ಕ್ರಮ ಕೈಗೊಂಡಿಲ್ಲ.

ತಪ್ಪಿತಸ್ಥರ ವಿರುದ್ಧ ಕ್ರಮ 
ಮಹಾಲಿಂಗಪುರ ಪುರಸಭೆಯಲ್ಲಿ ನಡೆದ ಗಲಾಟೆ ಸಂಬಂಧ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.
ಇಲ್ಲಿಯವರೆಗೂ ಯಾರೂ ದೂರು ನೀಡಿಲ್ಲ. ಮಹಾಲಿಂಗಪುರ ಪೆÇಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಾಗಿದೆ. ಪರಿಸ್ಥಿತಿ ಕೈ ಮೀರಿದಾಗ ಲಾಠಿ ಚಾರ್ಜ್ ಮಾಡಲಾಗಿದೆ ಎಂದು ಬಾಗಲಕೋಟೆ ಎಸ್ಪಿ ಲೋಕೇಶ್ ಪ್ರತಿಕ್ರಿಯೆ ನೀಡಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: attack lady corporatorbagalkotebjp mlamahalingapurasiddu savadi
ShareTweetSendShare
Join us on:

Related Posts

darshan-puttannaiah-solar-powered-organic-jaggery-units-sunkathonur-mandya

ಸಾವಯವ ಕೃಷಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮತ್ತೊಂದು ಬಲವಾದ ಹೆಜ್ಜೆ

by admin
November 18, 2026
0

ಸುಂಕಾತೊಣ್ಣೂರಿನ ಆಲೆಮನೆಗಳಿಗೂ ಸೋಲಾರ್ ಬಲ ಮಂಡ್ಯ: ಪಾಂಡವಪುರ ತಾಲೂಕಿನಲ್ಲಿ ಸಾವಯವ ಕೃಷಿ ಹಾಗೂ ಪರಿಸರ ಸ್ನೇಹಿ ಬೆಲ್ಲ ತಯಾರಿಕೆಯನ್ನು ಮತ್ತಷ್ಟು ಉತ್ತೇಜಿಸುವ ನಿಟ್ಟಿನಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ...

melukote-darshan-puttannaiah-agriculture-dairy-farming-beneficiary-distribution-program

ಮೇಲುಕೋಟೆಯಲ್ಲಿ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಕೃಷಿ-ಹೈನುಗಾರಿಕೆಗೆ ಹೊಸ ಚೈತನ್ಯ

by admin
November 18, 2026
0

ಮಂಡ್ಯ: ರೈತರನ್ನು ಆರ್ಥಿಕವಾಗಿ ಸ್ವಾವಲಂಬಿ ಮತ್ತು ಸದೃಢರನ್ನಾಗಿ ಮಾಡಲು ಕಟಿಬದ್ಧರಾಗಿರುವ ಮೇಲುಕೋಟೆ ಕ್ಷೇತ್ರದ ಶಾಸಕ ಶ್ರೀ ದರ್ಶನ್ ಪುಟ್ಟಣ್ಣಯ್ಯ ಅವರ ನಿರಂತರ ಶ್ರಮದಿಂದ ಕ್ಷೇತ್ರದಲ್ಲಿ ಕೃಷಿ ಮತ್ತು...

gowdagere-village-rainwater-harvesting-awareness-program-mandya

ಗೌಡಗೆರೆ ಗ್ರಾಮದಲ್ಲಿ ಮಳೆ ನೀರು ಕೊಯ್ಲು ಜಾಗೃತಿ – ಪುಟ್ಟಣ್ಣಯ್ಯ ಫೌಂಡೇಶನ್ ಮತ್ತು ಮೈರಾಡ ಸಂಸ್ಥೆಯಿಂದ ಆಯೋಜನೆ

by admin
November 18, 2026
0

ದರ್ಶನ್ ಪುಟ್ಟಣ್ಣಯ್ಯ ಮಾರ್ಗದರ್ಶನದಲ್ಲಿ 'ನಮ್ಮ ಊರು ನಮ್ಮ ಹೆಮ್ಮೆ' ಸಂವಾದ ಕಾರ್ಯಕ್ರಮ ಮಂಡ್ಯ: ಮಾಣಿಕ್ಯನಹಳ್ಳಿ ಪಂಚಾಯಿತಿ ವ್ಯಾಪ್ತಿಯ ಗೌಡಗೆರೆ ಗ್ರಾಮದಲ್ಲಿ ದಿನಾಂಕ 18.11.2026 ರ ಬುಧವಾರ ಮಧ್ಯಾಹ್ನ...

akasa-air-bengaluru-chandigarh-daily-direct-flight-december-2026

ಬೆಂಗಳೂರಿನಿಂದ ಚಂಡೀಗಢಕ್ಕೆ ಮತ್ತೊಂದು ದೈನಂದಿನ ನೇರ ವಿಮಾನ: ಡಿ. 1ರಿಂದ ಹಾರಾಟ ಶುರು

by admin
November 18, 2026
0

ಬೆಂಗಳೂರು: ಬೆಂಗಳೂರಿನಿಂದ ಉತ್ತರ ಭಾರತಕ್ಕೆ ಪ್ರಯಾಣಿಸುವ ಉದ್ಯಮಿಗಳು ಹಾಗೂ ಪ್ರವಾಸಿಗರಿಗೆ ಆಕಾಶ ಏರ್‌ ಸಿಹಿ ಸುದ್ದಿ ನೀಡಿದೆ. ಡಿಸೆಂಬರ್ 1, 2026ರಿಂದ ಬೆಂಗಳೂರು ಮತ್ತು ಚಂಡೀಗಢ ನಡುವೆ...

bengaluru-airport-phoenix-aircraft-recovery-training-school

ರನ್‌ವೇಯಲ್ಲಿ ವಿಮಾನ ಕೆಟ್ಟು ನಿಂತರೆ ತೆರವು ಮಾಡೋದು ಹೇಗೆ? ಪ್ರಾಯೋಗಿಕ ತರಬೇತಿಗಾಗಿ ಬೆಂಗಳೂರಿಗೆ ಬಂದಿದೆ ದೈತ್ಯ ‘ಫೀನಿಕ್ಸ್’!

by admin
November 18, 2026
0

ಬೆಂಗಳೂರು: ರನ್‌ವೇ ಅಥವಾ ವಿಮಾನ ನಿಲ್ದಾಣದ ಆವರಣದಲ್ಲಿ ಕೆಟ್ಟು ನಿಂತ ವಿಮಾನಗಳನ್ನು ಸುರಕ್ಷಿತವಾಗಿ ತೆರವುಗೊಳಿಸುವ ತರಬೇತಿಗಾಗಿ ದೈತ್ಯ ಬೋಯಿಂಗ್ 737-200 ವಿಮಾನವನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram