ಬಿಜೆಪಿ ಶಾಸಕನಿಗೆ ರೈತ ಕಪಾಳ ಮೋಕ್ಷ BJP MLA slapped by elderly farmer on stage saaksha tv
ಉತ್ತರ ಪ್ರದೇಶ : ರೈತನೋರ್ವ ಬಿಜೆಪಿ ಶಾಸಕನಿಗೆ ಕಪಾಳಮೋಕ್ಷ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಯುಪಿಯ ಸದರ್ ಕ್ಷೇತ್ರದ ಬಿಜೆಪಿ ಶಾಸಕ ಪಂಕಜ್ ಗುಪ್ತಾ ಅವರಿಗೆ ವೃದ್ಧ ರೈತ ಕಪಾಳಕ್ಕೆ ಹೊಡೆದಿದ್ದಾರೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ಇದು ಕಳೆದ ಮೂರು ದಿನಗಳ ಹಿಂದೆ ನಡೆದ ಘಟನೆಯ ವಿಡಿಯೋ ಎಂದು ಹೇಳಲಾಗುತ್ತಿದೆ.
ಶಾಸಕ ಪಂಕಜ್ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಅಲ್ಲಿಗೆ ಬಂದ ವೃದ್ಧ ಸಾರ್ವಜನಿಕ ಸಭೆಯಲ್ಲೇ ಎಂಎಲ್ ಎಗೆ ಕಪಾಳಮೋಕ್ಷ ಮಾಡಿದ್ದಾರೆ.
ಇನ್ನು ಈ ಘಟನೆ ಬಳಿಕ ರೈತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ವಿಡಿಯೋವನ್ನು ಸಮಾಜವಾದಿ ಪಕ್ಷದ ಮಾಧ್ಯಮ ಘಟಕ ಸಹ ಶೇರ್ ಮಾಡಿಕೊಂಡಿದೆ.