ರಾಜ್ಯದಲ್ಲಿ ಕೊರೊನಾ ವೈರಸ್ ತನ್ನ ಅಟ್ಟಹಾಸ ಮೆರೆಯುತ್ತಿದೆ. ಲಾಕ್ ಡೌನ್ ಜೊತೆಗೆ ಕೆಲವು ಕಡೆ ಸೀಲ್ ಡೌನ್ ಮಾಡಲಾಗಿದೆ. ಲಾಕ್ ಡೌನ್ ನಿಯಮ ಜಾರಿ ಇದ್ದರೂ ನಿಯಮ ಉಲ್ಲಂಘನೆ ಮಾಡಿ, ಬಿಜೆಪಿಯ ಶಾಸಕರೊಬ್ಬರು ಜನರನ್ನು ಸೇರಿಸಿ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಬಿಜೆಪಿಯ ಶಾಸಕ ಮಸಾಲೆ ಜಯರಾಮ್ ಜನರನ್ನು ಸೇರಿಸಿ ತಮ್ಮ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಈ ಸುದ್ದಿ ತಿಳಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶಾಸಕ ಮಸಾಲೆ ಜಯರಾಮ್ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.
ದೂರವಾಣಿ ಮೂಲಕ ಜಯರಾಮ್ ಅವರೊಂದಿಗೆ ನವೀನ್ ಕುಮಾರ್ ಕಟೀಲ್ ಮಾತನಾಡಿದ್ದಾರೆ. ಘಟನೆಯ ಹಿನ್ನೆಲೆ ಮತ್ತು ನಡೆದಿರುವ ಸತ್ಯಾಂಶದ ಬಗ್ಗೆ ಮಾಹಿತಿ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ. ಅಲ್ಲದೆ ಕ್ರಮ ಕೈಗೊಳ್ಳಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ








