ಬಿಜೆಪಿಗರು ಕಾಂಗ್ರೆಸ್ ಸೇರ್ಪಡೆ ಚರ್ಚೆ ನಿಜ : ಸತೀಶ್ ಜಾರಕಿಹೊಳಿ
ಚಿಕ್ಕೋಡಿ : 40 ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷ ಸೇರ್ಪಡೆ ಬಗ್ಗೆ ವರಿಷ್ಠರ ಮಟ್ಟದಲ್ಲಿ ಚರ್ಚೆ ನಡೆದಿರುವುದು ನಿಜ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ರಾಜು ಕಾಗೆ ಅವರ “40 ಬಿಜೆಪಿ ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಹೇಳಿಕೆಗೆ ಹುಕ್ಕೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಸತೀಶ್ ಜಾರಕಿಹೊಳಿ, ಬಿಜೆಪಿ ಶಾಸಕರು ಕಾಂಗ್ರೆಸ್ ಸೇರ್ಪಡೆ ಕುರಿತು ಬೆಂಗಳೂರಿನಲ್ಲಿ ವರಷ್ಠರ ಹಂತದಲ್ಲಿ ಚರ್ಚೆ ನಡೆದಿರೋದು ನಿಜ.
ಆದ್ರೆ ಯಾರು ಎಷ್ಟು ಜನ ಬರ್ತಾರೆ ಅಂತ ನನಗೆ ಮಾಹಿತಿ ಇಲ್ಲ. ಆದರೆ ಶಾಸಕರು ಕಾಂಗ್ರೆಸ್ಗೆ ಬರುವ ಬಗ್ಗೆ ಚರ್ಚೆ ಆಗಿದೆ ಎಂದು ಕುತೂಹಲಕಾರಿ ಹೇಳಿಕೆ ನೀಡಿದರು.
ರಾಜು ಕಾಗೆ ಹೇಳಿದ್ದೇನು..?
ಅಥಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜು ಕಾಗೆ, ಬಿಜೆಪಿಯ 40 ಶಾಸಕರು ಶೀಘ್ರದಲ್ಲಿಯೇ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ.
2023ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ.
ಸದ್ಯ ಬಿಜೆಪಿಯಲ್ಲಿ ಒಳಜಗಳ ಹೆಚ್ಚಾಗಿದ್ದು, ಬೆಳಗಾವಿಯ ಬಿಜೆಪಿ ಶಾಸಕರೇ ಕಾಂಗ್ರೆಸ್ ಗೆ ಬರಲು ಸಿದ್ಧರಿದ್ದಾರೆ ಎಂದು ಹೇಳಿದರು.









