ಬೆಂಗಳೂರು:: ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಂ.ಕೆ ಪ್ರಾಣೇಶ್ ಹಾಗೂ ಅವರ ಪತ್ನಿಗೂ ಕೊರೊನಾ ಪಾಸಿಟಿವ್ ಬಂದಿದೆ. ಈ ವಿಚಾರವನ್ನು ಪ್ರಾಣೇಶ್ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದು, ಶೀಘ್ರದಲ್ಲೇ ಗುಣಮುಖರಾಗಿ ಬರುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಮ್ಮ ಕುಟುಂಬದ ಕೊವಿಡ್ ಪರೀಕ್ಷಾ ವರದಿ ನಿನ್ನೆ ಸಂಜೆ ಬಂದಿದೆ. ನನಗೆ ಹಾಗೂ ನನ್ನ ಪತ್ನಿಗೆ ಪಾಸಿಟಿವ್ ಬಂದಿದೆ. ಈಗಾಗಲೇ ನಾವು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇವೆ ಎಂದು ಪ್ರಾಣೇಶ್ ತಿಳಿಸಿದ್ದಾರೆ.
ಯಾರೂ ಆತಂಕಪಡುವ ಅಗತ್ಯವಿಲ್ಲ. ಈ ವಿಷಯ ತಿಳಿದು ಎಲ್ಲರೂ ನನ್ನನ್ನು ಸಂಪರ್ಕ ಮಾಡಲು ಪ್ರಯತ್ನಿಸುತ್ತಾರೆ. ಚಿಕಿತ್ಸೆ ಪಡೆಯುತ್ತಿರುವ ಕಾರಣ ನಿಮ್ಮ ಕರೆಗಳಿಗೆ ಸ್ಪಂದಿಸಲು ಅಗುತ್ತಿಲ್ಲ ಎಂದು ಪ್ರಾಣೇಶ್ ಹೇಳಿಕೊಂಡಿದ್ದಾರೆ.
ಟಿವಿ ರಿಮೋಟ್ ಕೊಡಲಿಲ್ಲವೆಂದು ಆತ್ಮಹತ್ಯೆ
ಶಿವಮೊಗ್ಗ: ಟಿವಿ ರಿಮೋಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಈ ಘಟನೆ ಸೂಳೆಬೈಲಿನಲ್ಲಿ ನಡೆದಿದೆ. ಬಾಲಕಿಯು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ...