ರಾಮನಗರ: ಬಿಜೆಪಿ ಸಂಸದರು ಗಂಡಸರಲ್ಲ ಎಂದು ಮಾಗಿ ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿದ್ದಾರೆ.
ರಾಮನಗರದ ನಾಗರಕಲ್ಲುದೊಡ್ಡಿ ಗ್ರಾಮದಲ್ಲಿ ಮಾತನಾಡಿದ ಅವರು, ಬಿಜೆಪಿ ಸಂಸದರೆಲ್ಲ ಶೋಪೀಸ್ಗಳು, ನಮ್ಮ ಹೋರಾಟ ನೋಡಿಯಾದರೂ ಬಿಜೆಪಿಯ ಗಂಡಸರು ಹೋರಾಟ ಮಾಡುತ್ತಾರೆಯೋ ಎಂಬುವುದನ್ನು ನೋಡೋಣ. ಇದರ ಅರ್ಥ ಬಿಜೆಪಿಯಲ್ಲಿ ಯಾರು ಗಂಡಸರು ಇಲ್ಲ ಅಂತ ಎಂದು ಹೇಳಿದ್ದಾರೆ.
ಹೆಚ್ಚು ತೆರಿಗೆ ಕಟ್ಟುವ ಎರಡನೇ ರಾಜ್ಯ ನಮ್ಮದು. ಆದರೆ, ನಮ್ಮ ಪಾಲನ್ನು ಕೇಂದ್ರ ನಮಗೆ ನೀಡುತ್ತಿಲ್ಲ. ಬಿಜೆಪಿಯ ಸಂಸದರು ನರೇಂದ್ರ ಮೋದಿ ಮುಂದೆ ಕೂರೋದು ಇಲ್ಲ, ಏಳೋದು ಇಲ್ಲ. ಕೇವಲ ಮೋದಿ ಹೆಸರಲ್ಲಿ ಗೆಲ್ಲುತ್ತಾರೆ. ಇವರಿಗೆಲ್ಲ ವೈಯಕ್ತಿಕ ವರ್ಚಸ್ಸು ಇಲ್ಲ. ಇವರೆಲ್ಲ ಪಕ್ಕದ ತಮಿಳುನಾಡು ಸಂಸದರು ತಮ್ಮ ಹಕ್ಕಿಗಾಗಿ ಮಾಡುವ ಹೋರಾಟ ನೋಡಿ ಕಲಿಯಲಿ ಎಂದು ಹೇಳಿದ್ದಾರೆ.