ರಾಯಚೂರು : ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಮನೆಗೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಟೀಲ್, ಅಶೋಕ್ ಗಸ್ತಿ ಹಲವಾರು ವರ್ಷ ಪಾರ್ಟಿ ಕಟ್ಟಿದ್ದಾರೆ. ಅವರ ಕುಟುಂಬದೊಂದಿಗೆ ಪಕ್ಷವಿದೆ ಎಂದರು.
ಇದೇ ವೇಳೆ ರೈತರ ಪ್ರತಿಭಟನೆ ಬಗ್ಗೆ ಮಾತನಾಡಿದ ಅವರು, ಭೂಸುಧಾರಣೆ ಹಾಗೂ ಎಪಿಎಂಸಿ ಕಾಯ್ದೆಗಳು ರೈತ ಪರವಾಗಿವೆ.
ಇದನ್ನೂ ಓದಿ : ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ : ಡಿ.ಕೆ.ಶಿವಕುಮಾರ್
ನಾನೂ ರೈತನಾಗಿದ್ದು, ರೈತನಿಗೆ ಅನುಕೂಲವಾಗುವ ಕಾಯ್ದೆಯಾಗಿದೆ. ರೈತನ ಹೆಸರಿನಲ್ಲಿ ಈಗ ಪ್ರತಿಭಟನೆ ಮಾಡುತ್ತಿದ್ದಾರೆ.
ಮೋದಿ ಹಾಗೂ ಯಡಿಯೂರಪ್ಪ ಸರ್ಕಾರ ರೈತ ಪರವಾಗಿ ಕೆಲಸ ಮಾಡುತ್ತಿದೆ ಎಂದರು.
ಕೋವಿಡ್ 19 ಸೋಂಕಿಗೆ ಒಳಗಾಗಿ ಅಶೋಕ್ ಗಸ್ತಿ ಸೆಪ್ಟೆಂಬರ್ 17ರಂದು ನಿಧನರಾಗಿದ್ದರು.








