17 ಜನರಿಂದ ಬಿಜೆಪಿ ಅಧಿಕಾರಕ್ಕೆ ಬಂದಿಲ್ಲ : ವಲಸಿಗರ ವಿರುದ್ಧ ರೇಣುಕಾಚಾರ್ಯ ಗರಂ
ಬೆಂಗಳೂರು : ಕಾಂಗ್ರೆಸ್ – ಜೆಡಿಎಸ್ ಪಕ್ಷ ತೊರೆದು ಬಂದ 17 ಶಾಸಕರಿಂದ ಬಿಜೆಪಿ ಸರ್ಕಾರ ರಚನೆಯಾಗಿದೆ ಎಂಬುದು ಶುದ್ಧ ಸುಳ್ಳು.
ಪಕ್ಷದ ಕಾರ್ಯಕರ್ತರ ಶ್ರಮದಿಂದ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ವಲಸೆ ಶಾಸಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ವಲಸೆ ನಾಯಕರ ವಿರುದ್ಧ ಮುಗಿಬಿದ್ದರು. ಯಾರೋ ಒಬ್ಬರಿಂದ ಸರ್ಕಾರ ಬಂದಿದೆ ಎಂದು ಹೇಳಲಾಗದು.
ಲಕ್ಷಾಂತರ ಕಾರ್ಯಕರ್ತರ ಶ್ರಮದಿಂದ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಮೊದಲು 105 ಜನ ಆಮೇಲೆ ಕಾಂಗ್ರೆಸ್ ಮತ್ತು ಜೆಡಿಎಸ್ ನಿಂದ ಬೇಸತ್ತು 17 ಮಂದಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ನನ್ನಿಂದಲೇ ಸರ್ಕಾರ ಬಂದಿದೆ ಅಂತಾ ಯಾರು ಹೇಳುತ್ತಾರೋ ಅವರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಕಿಡಿಕಾರಿದರು. ಸುತ್ತೂರಿನಲ್ಲಿ ಬಿಎಸ್ ವೈ ವಿರುದ್ಧ ಶ್ರೀನಿವಾಸ್ ಪ್ರಸಾದ್ ಬುಸ್ ಬುಸ್
ನಮ್ಮ ಪಕ್ಷದ ನಾಯಕರು, ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಮತ್ತು ಕಾರ್ಯಕರ್ತರ ಶ್ರಮ ತ್ಯಾಗದಿಂದ ಪಕ್ಷ ಗಟ್ಟಿಗೊಂಡಿದೆ.
ಬಿಜೆಪಿ ಸೇರಿರುವ 17 ಶಾಸಕರ ಕೊಡುಗೆಯನ್ನು ನಾನು ಗೌರವಿಸುತ್ತೇನೆ. ಆದರೆ 105 ಶಾಸಕರು ನಾವು ಗೆದ್ದಿರಲಿಲ್ಲ ಎಂದರೆ ಈ ಸರ್ಕಾರ ಹೇಗೆ ಬರುತ್ತಿತ್ತು. ಇದನ್ನು ಯಾರು ಮರೆಯಬಾರದು ಎಂದು ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು.
ಇದೇ ವೇಳೆ ಸಿ.ಪಿ.ಯೋಗೇಶ್ವರ್ ಗೆ ಸಚಿವ ಸ್ಥಾನ ಕೊಟ್ಟರೆ ತಪ್ಪೇನು ಎಂಬ ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅದು ಅವರ ವೈಯಕ್ತಿಕ ಅಭಿಪ್ರಾಯ. ಅಂತಿಮವಾಗಿ ಪಕ್ಷದ ತೀರ್ಮಾನ ಮುಖ್ಯ. ನಾವೂ ಸಹ ನಾಯಕರಿಗೆ ಕೆಲವೊಂದು ಸಲಹೆಗಳನ್ನು ಕೊಟ್ಟಿದ್ದೇವೆ.
ಜನರಿಂದ ನೇರವಾಗಿ ಆಯ್ಕೆಯಾದವರಿಗೆ ಸಚಿವ ಸ್ಥಾನ ಕೊಡುವುದು ಶಿಷ್ಟಾಚಾರ. ಪಕ್ಷ, ಸರ್ಕಾರಕ್ಕಿಂತ ಯಾರು ದೊಡ್ಡವರಲ್ಲ ಎಂದರು. ರಾಜ್ಯದಲ್ಲಿ ಆಸ್ತಿ ಸಂಪಾದಿಸಿರುವುದು ನಾನೊಬ್ನೆ ಮಾತ್ರಾನಾ: ಡಿ.ಕೆ ಶಿವಕುಮಾರ್ ಪ್ರಶ್ನೆ
ತಮ್ಮ ಮನೆಯಲ್ಲಿ ನಡೆದ ಸಭೆ ಬಗ್ಗೆ ಮಾತನಾಡಿ, ಇಂದು ಹತ್ತು ಜನ ಶಾಸಕರು ಒಟ್ಟಿಗೆ ಸೇರಿದ್ದೆವು. ನಮ್ಮ ಮನೆಯಲ್ಲಿ ಉಪಹಾರಕ್ಕೆ ಸೇರಿದ್ದೆವು.
ನಾವೇನು ರೆಸಾರ್ಟ್, ಹೋಟೆಲ್ ನಲ್ಲಿ ಸಭೆ ನಡೆಸಿಲ್ಲ, ನಮ್ಮ ಮನೆಯಲ್ಲಿ ಚರ್ಚೆ ನಡೆಸಿದ್ದೇವೆ. ಆದಷ್ಟು ಬೇಗ ನಮ್ಮ ಅಭಿಪ್ರಾಯವನ್ನು ವರಿಷ್ಠರ ಗಮನಕ್ಕೆ ತರುತ್ತೇವೆ ಎಂದು ರೇಣುಕಾಚಾರ್ಯ ತಿಳಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel