BJP Politics : ರಮೇಶ್ ಜಾರಕಿಹೊಳಿ, ಈಶ್ವರಪ್ಪ ಜೊತೆ ಸಿಎಂ ಸಂಧಾನ ಯಶಸ್ವಿ….
ರಮೇಶ್ ಜಾರಕಿಹೊಳಿ, ಈಶ್ವರಪ್ಪ ಜೊತೆ ಸಿಎಂ ಸಂಧಾನ ಯಶಸ್ವಿಯಾಗಿದೆ. ನಿನ್ನೆ ರಾತ್ರಿ ಸಿಎಂ ಸಂಧಾನ ಸಭೆ ನಡೆಸಿದ್ದಾರೆ. ಆದಷ್ಟು ಬೇಗ ಸಂಪುಟ ವಿಸ್ತರಣೆ ಮಾಡುವ ಬಗ್ಗೆ ಸಿಎಂ ಭರವಸೆ ನೀಡಿದ್ದಾರೆ ಎನ್ನಲಾಗ್ತಿದೆ. ಮುಂದಿನ ವಾರ ಹೈಕಮಾಂಡ್ ನಾಯಕರನ್ನ ಭೇಟಿ ಮಾಡುತ್ತೇನೆ. ನೀವಿಬ್ಬರು ಅಧಿವೇಶನಕ್ಕೆ ಬನ್ನಿ ಎಂದು ಸಿಎಂ ಬೊಮ್ಮಾಯಿ ಮನವಿ ಮಾಡಿದ್ದಾರೆ.
ನಿಮ್ಮಿಬ್ಬರ ನಡೆಯಿಂದ ಪಕ್ಷಕ್ಕೆ,ಸರ್ಕಾರಕ್ಕೆ ಮುಜುಗರ ಆಗುತ್ತಿದೆ. ಚುನಾವಣೆ ವರ್ಷದಲ್ಲಿ ಬೇರೆ ಸಂದೇಶ ಹೋಗುತ್ತಿದೆ ಎಂದು ಸಿಎಂ ಮನವಿ ಮಾಡಿದ್ದಾರೆ. ಅಂದ್ಹಾಗೆ ಇಬ್ಬರೂ ನಾಯಕರೂ ಕೂಡ ಸಿಎಂ ಬೊಮ್ಮಾಯಿ ಅವರ ವಿರುದ್ಧ ಬಹಿರಂಗವಾಗಿ ಅಸಮಧಾನ ಹೊರಹಾಕಿದ್ದರು. ಇದೀಗ ಸಿಎಂ ಸಂಧಾನ ಯಶ್ವಸಿಯಾಗಿದೆ. ಹೀಗಾಗಿ ಅಧಿವೇಶನದಲ್ಲಿ ಇಬ್ಬರು ನಾಯಕರು ಭಾಗಿಯಾಗುವ ಸಾಧ್ಯತೆಯಿದೆ.
BJP Politics : CM’s talks with Ramesh Jarakiholi, Eshwarappa successful…







