ಸಿಟಿ ರವಿ ಲೂಟಿ ರವಿ ಎಂದು ಹೇಳಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಮಾತಿಗೆ ತಿರುಗೇಟು ನೀಡಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರು “ ಮೈಸೂರು ಭಾಗದಲ್ಲಿ ಸಿದ್ದರಾಮಯ್ಯರನ್ನ ಕಚ್ಚೆ ಹರುಕ ಎನ್ನುತ್ತಾರೆ ನಾನು ಅದನ್ನ ಹೇಳಬಹುದಲ್ವ ಎಂದು ಸಿ ಟಿ ರವಿ ತಿರುಗೇಟು ನೀಡಿದ್ದಾರೆ.
ಚಿಕ್ಕಮಂಗಳೂರು ತಾಲೂಕಿನ ಮುಳ್ಳಯ್ಯನಗಿರಿ ಸಮೀಪದ ಕವಿಕಲ್‌ಗಂಡಿ ಬಳಿ ಮಾತನಾಡಿದ ಅವರು, ಸಿದ್ದರಾಮಯ್ಯ ಶಾಸಕರಾಗಿದ್ದಾಗ ಹೇಗಿದ್ರೂ ಆಗದೇ ಇದ್ದಾಗ ಹೇಗಿದ್ರು ಅಂತ ಬಿಚ್ಚಿಡಲು ನನಗೂ ಬರುತ್ತೆ. ಮೈಸೂರಿನಲ್ಲಿ ಜನ ಸಿದ್ದರಾಮಯ್ಯನರನ್ನ ಕಚ್ಚೆ ಹರಕ ಅನ್ನುತ್ತಾರೆ. ಈ ಮಾತು ನನ್ನದ್ದಲ್ಲ, ಮೈಸೂರಿನ ಜನರದ್ದು. ಮೈಸೂರಿನ ಜನ ಹೀಗೆ ಮಾತನಾಡುತ್ತಾರೆ ಎಂದು ನಾನು ಆ ರೀತಿ ಹೇಳಬಹುದಲ್ವಾ? ನಾನು ಆ ರೀತಿ ಹೇಳಿದರೆ ಮರ್ಯಾದೆ ಹೋಗುವುದು ಅವರದ್ದೇ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಿ.ಟಿ.ರವಿ ಅಲ್ಲ, ಲೂಟಿ ರವಿ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಅದಕ್ಕೆ ದಾಖಲೆ ಬೇಕು. ಜನ ನನ್ನನ್ನ 4 ಬಾರಿ ಪ್ರೀತಿಯಿಂದ ಚುನಾವಣೆಯಿಂದ ಚುನಾವಣೆಗೆ ಹೆಚ್ಚಿನ ಲೀಡ್‌ನಲ್ಲಿ ಗೆಲ್ಲಿಸಿದ್ದಾರೆ. ಜವಾಬ್ದಾರಿಯಲ್ಲಿ ಇರುವ ವ್ಯಕ್ತಿ ಜವಾಬ್ದಾರಿಯಿಂದ ಮಾತನಾಡಬೇಕು ಎಂದು ತಿರುಗೇಟು ನೀಡಿದ್ದಾರೆ.








