BJP : ಪ್ರಿಯಾಂಕ್ ಕರ್ಗೆ ಕೊಲೆ ಮಾಡೋದಾಗಿ ಹೇಳಿದ್ದ ಬಿಜೆಪಿ ಮುಖಂಡ ಮಣಿಕಂಠ ಬಂಧನ..!!!
ಶಾಸಕ ಪ್ರಿಯಾಂಕ್ ಕರ್ಗೆಯನ್ನ ಕೊಲೆ ಮಾಡೋದಾಗಿ ಬೆದರಿಕೆ ಹಾಕಿದ್ದ ಕಲಬುರಗಿಯ ಬಿಜೆಪಿ ಮುಖಂಡ ಮಣಿಕಂಠ ರಾಠಾಡ್ ನನ್ನ ಪೊಲೀಸರು ಬಂಧಿಸಿದ್ದಾರೆ..
ಮಣಿಕಂಠ ರಾಠೋಡ್ ಹೇಳಿಕೆ ಹಿನ್ನಲೆಯಲ್ಲಿ ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಐಪಿಸಿ ಸೆಕ್ಷನ್ 506 ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಭಾನುವಾರ ಮಧ್ಯರಾತ್ರಿ ಹೈದರಾಬಾದ್ ನಲ್ಲಿ ಪೊಲೀಸರು ಬಂಧಿಸಿ ಕಲಬುರಗಿಗೆ ಕರೆ ತಂದಿದ್ದಾರೆ.
ಮಣಿಕಂಠ ಬಂಧನಕ್ಕಾಗಿ ಕಲಬುರಗಿ ಎಸ್ ಪಿ ಕಚೇರಿ ಮುಂಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದರು.
ನಾವು ಮತ್ತು ನಮ್ಮ ಕಾರ್ಯಕರ್ತರು ಮನಸ್ಸು ಮಾಡಿದರೆ ಬಿಜೆಪಿ ಲೀಡರ್‍ಗಳು ತಿರುಗಾಡಲು ಬಿಡುವುದಿಲ್ಲ ಎಂಬ ಪ್ರಿಯಾಂಕ್ ಹೇಳಿಕೆಗೆ , ಕಲಬುರಗಿಯ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿರುಗೇಟು ನೀಡಿದ್ದ ಮಣಿಕಂಠ ಅವರು , ಭಾರತ ದೇಶ ಉಳಿಸಲು ಮಿಲಿಟರಿ ಸೈನಿಕರು ಗಡಿಗಳಲ್ಲಿ ಹೇಗೆ ನಿಂತಿದ್ದಾರೋ ಅದೇ ರೀತಿ ನಾವು ಸಹ ಸಮಾಜ ಮತ್ತು ಬಡವರ ಸಲುವಾಗಿ ಮಿಲಿಟಿರಿಯಂತೆಯೇ ನಿಂತಿದ್ದೇವೆ.
ನಿಮಗೆ ಎಕೆ-47 ನಿಂದ ಶೂಟ್ ಮಾಡುವುದು ಇದೆಯಾ.. ಅಥವಾ ತೋಪ್‍ನಿಂದ ಶೂಟ್ ಮಾಡೋದಿದೆಯಾ.. ನೀವು ಶೂಟ್ ಮಾಡಿ ನಾವು ಸಾಯೋಕು ರೆಡಿ ಇದ್ದೀವಿ. ನಾವೂ ನಿಮಗೆ ಶೂಟ್ ಮಾಡೋಕೂ ರೆಡಿ ಇದ್ದೀವಿ ಎಂದಿದ್ದರು. ಈ ಹೇಳಿಕೆಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು.. ಇದೇ ಹೇಳಿಕೆ ಹಿನ್ನೆಲೆ ಅವರನ್ನ ಬಂಧಿಸಲಾಗಿದೆ..