ಕೋಲಾರದಲ್ಲಿ ರಮೇಶ್ ಕುಮಾರ್ ವಿರುದ್ಧ ಬಿಜೆಪಿ ಪ್ರತಿಭಟನೆ BJP protests saaksha tv
ಕೋಲಾರ : ಸದನದಲ್ಲಿ ಅತ್ಯಾಚಾರ ಸಂಬಂಧ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದೆ.
ಕೋಲಾರದಲ್ಲಿ ಬಿಜೆಪಿ ಯುವ ಮೋರ್ಚ ಹಾಗೂ ಮಹಿಳಾ ಮೋರ್ಚ ಕಾರ್ಯಕರ್ತರಿಂದ ಪ್ರತಿಭಟನೆ ನಗರದ ಹೊಸ ಬಸ್ ನಿಲ್ದಾಣದ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಗಿದೆ.
ಪ್ರತಿಭಟನೆ ವೇಳೆ ರಮೇಶ್ ಕುಮಾರ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.
ಅಲ್ಲದೇ ರಮೇಶ್ ಕುಮಾರ್ ಭಾವಚಿತ್ರ ಹಿಡಿದು ಅಣಕು ಶವಯಾತ್ರೆ ನಡೆಸಿ ಪ್ರತಿಕೃತ ದಹನ ಮಾಡಿದ್ದಾರೆ.
ಹಾಗೇ ರಮೇಶ್ ಕುಮಾರ್ ಸಾರ್ವಜನಿಕವಾಗಿ ಕ್ಷಮೆ ಕೇಳುವಂತೆ, ಸದನದಿಂದ ಹೊರಹಾಕುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.