ಪಸೆರ್ಂಟ್ ರಾಜಕಾರಣದ ಪಿತಾಮಹರು ಯಾರು? : ಕಾಂಗ್ರೆಸ್ ಗೆ ಬಿಜೆಪಿ ಪ್ರಶ್ನೆ Congress saaksha tv
ಬೆಂಗಳೂರು : ಸಿದ್ದರಾಮಯ್ಯನವರೇ, ಅಂದ ಹಾಗೆ ಕೆಪಿಸಿಸಿ ಕಚೇರಿಯಲ್ಲಿ ನಡೆದ ಭ್ರಷ್ಟಾಚಾರದ ಪಿಸುಮಾತು ಪ್ರಕರಣದ ಬಗ್ಗೆ ತನಿಖೆ ನಡೆಸುವುದು ಯಾರು ಎಂದು ರಾಜ್ಯ ಬಿಜೆಪಿ ಘಟಕ ಪ್ರಶ್ನಿಸಿದೆ.
ಕೆಪಿಸಿಸಿ ಕಚೇರಿಯ ವಿಡಿಯೋ ವಿಚಾರವಾಗಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಪ್ರಶ್ನೆಗಳ ಸುರಿಮಳೆಗೈದಿದೆ.
ಬಿಜೆಪಿ ಟ್ವೀಟ್ ನಲ್ಲಿ..
ಪಸೆರ್ಂಟ್ ರಾಜಕಾರಣದ ಪಿತಾಮಹರು ಯಾರು? 12% ಡಿಕೆಶಿ 10% ಸೀದಾರೂಪಯ್ಯ. ಮೆಂದ ಇಲಾಖೆಗಳು- ಲೋಕೋಪಯೋಗಿ, ಇಂಧನ, ಜಲಸಂಪನ್ಮೂಲ, ಗ್ರಾಮೀಣಾಭಿವೃದ್ಧಿ. ಹಾಗಾದರೆ ಈ ಇಲಾಖೆಗಳನ್ನು ನಿಭಾಯಿಸಿದ್ದ ಡಾ.ಎಚ್.ಸಿ. ಮಹಾದೇವಪ್ಪ, ಎಂ.ಬಿ.ಪಾಟೀಲ್, ಎಚ್.ಕೆ.ಪಾಟೀಲರ ಪಸೆರ್ಂಟೇಜ್ ಎಷ್ಟು? ಎಲ್ಲ ಸೇರಿ 40% !!!
ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂದು ಸಿದ್ದರಾಮಯ್ಯನವರು ಹೇಳುತ್ತಿರುವುದು ಇವರಿಗೆ ಇರಬೇಕಲ್ಲವೇ? 6 ರಿಂದ 8 % ಇದ್ದ ಲಂಚವನ್ನು 12% ಗೆ ಏರಿಸಿದ್ದೇ ಡಿಕೆಶಿ ಎಂದು ಸಲೀಂ ಬಹಿರಂಗವಾಗಿ ಹೇಳಿದ್ದರ ಬಗ್ಗೆ ಮೊದಲು ಮಾತನಾಡಿ. ಹಾಗಾದರೆ ಭ್ರಷ್ಟಾಚಾರವನ್ನು ಸಾಂಸ್ಥೀಕರಿಸಿದ್ದೇ ನೀವು ಎಂದಾಯ್ತಲ್ಲವೇ ಎಂದು ಕುಟುಕಿದೆ.
ಸಿದ್ದರಾಮಯ್ಯನವರೇ, ನಿಮ್ಮ ಸರ್ಕಾರದಲ್ಲೇ ಅಲ್ಲವೇ ಡಿಕೆಶಿ ಇಂಧನ ಸಚಿವರಾಗಿದ್ದದ್ದು? ಅವರ ಕಾಲದಲ್ಲೇ ಭ್ರಷ್ಟಾಚಾರ 12% ಗೆ ಏರಿಕೆ ಆಯ್ತು ಎಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಿಸುಮಾತು ಪ್ರಕರಣದಿಂದ ತಿಳಿದು ಬಂದಿದೆ. ಇದರಲ್ಲಿ ನಿಮ್ಮ ಪಾಲೆಷ್ಟು ಸೀದಾರೂಪಯ್ಯ?
ಗುತ್ತಿಗೆದಾರರ ಒಕ್ಕೂಟ ಬರೆದ ಪತ್ರವನ್ನು ಆಧರಿಸಿ ತನಿಖೆ ನಡೆಸುವುದಕ್ಕೆ ಸಿಎಂ ಈಗಾಗಲೇ ಆದೇಶ ನೀಡಿದ್ದಾರೆ. ತಾವು ಮುಖ್ಯಮಂತ್ರಿಯಾದ ಬಳಿಕ ನಡೆದ 10 ಕೋಟಿ ಮೇಲ್ಪಟ್ಟ ಎಲ್ಲ ಟೆಂಡರ್ಗಳ ಪರಿಶೀಲನೆಗೂ ಸೂಚನೆ ನೀಡಿದ್ದಾರೆ. ನಿಮ್ಮ ಬಗ್ಗೆ ಹೇಳಿ, ಭ್ರಷ್ಟಾಚಾರದ ಪಿಸುಮಾತಿಗೆ ನೀವು ಉತ್ತರದಾಯಿಯಲ್ಲವೇ ಪಸರ್ಂಟೇಜ್ಸೀದಾರೂಪಯ್ಯ !?
ಸಿದ್ದರಾಮಯ್ಯನವರೇ, ಅಂದ ಹಾಗೆ ಕೆಪಿಸಿಸಿ ಕಚೇರಿಯಲ್ಲಿ ನಡೆದ ಭ್ರಷ್ಟಾಚಾರದ ಪಿಸುಮಾತು ಪ್ರಕರಣದ ಬಗ್ಗೆ ತನಿಖೆ ನಡೆಸುವುದು ಯಾರು? ಡಿಕೆಶಿ ಆರೋಪಿ ಸ್ಥಾನದಲ್ಲಿದ್ದಾರೆ. ನಿಮ್ಮ ಆಪ್ತ ಉಗ್ರಪ್ಪ ಆರೋಪಿಸಿದ್ದಾರೆ. ನೀವೇ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಪಸರ್ಂಟೇಜ್ ಏರಿಕೆಯಾಗಿದೆ. ತನಿಖೆ ಯಾರು ನಡೆಸಬೇಕು ಪಸರ್ಂಟೇಜ್ಸೀದಾರೂಪಯ್ಯ ಎಂದು ಬಿಜೆಪಿ ಪ್ರಶ್ನಿಸಿದೆ.









