ʻಡಿಕೆ ದಾಟಲಿಲ್ಲ, ಮೇಕೆಯಾದರೂ ದಾಟಲಿʼ : ಬಿಜೆಪಿ ವ್ಯಂಗ್ಯ
ಬೆಂಗಳೂರು : ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಇಂದಿನಿಂದ ಪಾದಯಾತ್ರೆ ಆರಂಭಿಸಿದೆ. ಸಂಗಮದಲ್ಲಿ ಕಾಂಗ್ರೆಸ್ ಪಾದಯಾತ್ರೆಗೆ ಚಾಲನೆ ಸಿಕ್ಕಿದೆ.
ಇದಕ್ಕೂ ಮುನ್ನ ಡಿ.ಕೆ.ಶಿವಮಾರ್, ಸಂಗಮದಲ್ಲಿ ವಿಶೇಷ ಪೂಜೆ ಮಾಡಿದ್ರು, ಈ ವೇಳೆ ಅವರ ಕಾಲು ಸ್ಲಿಪ್ ಆಗಿತ್ತು. ಈ ವಿಡಿಯೋವನ್ನು ಹಂಚಿಕೊಂಡಿರುವ ಬಿಜೆಪಿ, ʻಡಿಕೆ ದಾಟಲಿಲ್ಲ, ಮೇಕೆಯಾದರೂ ದಾಟಲಿʼ ಎಂದು ವ್ಯಂಗ್ಯವಾಡಿದೆ.
ಇನ್ನ ಕಾಂಗ್ರೆಸ್ ಪಾದಯಾತ್ರೆಗೆ ಬಿಜೆಪಿ ನಾಯಕರು ಟ್ವಿಟ್ಟರ್ ಮೂಲಕ ವಿರೋಧ ವ್ಯಕ್ತಪಡಿಸಿದ್ದಾರೆ.
ಡಿ.ಕೆ.ಶಿವಕುಮಾರ್ ಅವರು ಜಲಸಂಪನ್ಮೂಲ ಸಚಿವರಾಗಿದ್ದಾಗ ಮೇಕೆದಾಟು ಯೋಜನೆ ನೆನಪಾಗಲಿಲ್ಲವೇ?
ಈಗ ಪಾದಯಾತ್ರೆ ಮಾಡುವ ಬದಲು ಅಂದೇ ಯೋಜನೆಗೆ ಸಂಬಂಧಪಟ್ಟ ಕೆಲಸಗಳನ್ನು ಮಾಡಿಸಬಹುದಿತ್ತಲ್ಲವೇ? ಎಂದು ಸಚಿವ ಸುನೀಲ್ ಕುಮಾರ ಟ್ವೀಟ್ ಮಾಡಿದ್ದಾರೆ.
ಅಧಿಕಾರವಿದ್ದಾಗ ಮೇಕೆದಾಟು ಯೋಜನೆ ಬಗ್ಗೆ ಕಾಂಗ್ರೆಸ್ ನಿರ್ಲಕ್ಷ್ಯ ತೋರಿಸಿತ್ತು. ಈಗ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಬೀದಿನಾಟಕ ಮಾಡುತ್ತಿದೆ.
ಅಧಿಕಾರದಲ್ಲಿದ್ದಾಗ ಇಲ್ಲದ ಇಚ್ಛಾಶಕ್ತಿ, ಚುನಾವಣೆಗಾಗಿ ಬಂದಿರುವ ಹಠಾತ್ ರಾಜಕೀಯ ಆಸಕ್ತಿ ಎಲ್ಲವನ್ನೂ ಜನ ಗಮನಿಸುತ್ತಿದ್ದಾರೆ.
ಮೇಕೆದಾಟು ಯೋಜನೆ ಜಾರಿ ಮಾಡುವ ನೈಜ ಬದ್ಧತೆ ಇರುವುದು ಬಿಜೆಪಿಗೆ ಮಾತ್ರ ಎಂದು ಕಾಂಗ್ರೆಸ್ ಪಾದಯಾತ್ರೆ ವಿರುದ್ಧ ಸಚಿವ ಸುಧಾಕರ್ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.