BJP | “ಸಿದ್ದರಾಮಯ್ಯ ಕರ್ನಾಟಕ ರಾಜ್ಯದ ʼಪರ್ಸೆಂಟೇಜ್ ಪಿತಾಮಹ”
ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯದ ʼಪರ್ಸೆಂಟೇಜ್ ಪಿತಾಮಹʼ ಎಂದರೆ ತಪ್ಪಾಗಲಾರದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ದ ರಾಜ್ಯ ಬಿಜೆಪಿ ಕಿಡಿಕಾರಿದೆ.
ಸಿ.ಎಂ.ಇಬ್ರಾಹಿಂ ಅವರ ಹೇಳಿಕೆಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಬಿಜೆಪಿ, ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಅವರ ಅಕ್ಕಪಕ್ಕದಲ್ಲೇ ಪರ್ಸೆಂಟೇಜ್ ವ್ಯವಹಾರ ನಡೆಯುತ್ತಿತ್ತು ಎಂದು ಸಿದ್ದರಾಮಯ್ಯ ಆಪ್ತ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. ಈ ಬಗ್ಗೆ #ಬುರುಡೆರಾಮಯ್ಯ ಅವರ ಸ್ಪಷ್ಟೀಕರಣ ಏನು ಎಂದು ಪ್ರಶ್ನಿಸಿದೆ. ಅಲ್ಲದೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯದ ʼಪರ್ಸೆಂಟೇಜ್ ಪಿತಾಮಹʼ ಎಂದರೆ ತಪ್ಪಾಗಲಾರದು ಎಂದು ಕುಟುಕಿದೆ.
ಮಾನ್ಯ @siddaramaiah ಅವರೇ,
ಅರ್ಕಾವತಿ ಕರ್ಮಕಾಂಡಕ್ಕೆ ಸಂಬಂಧಪಟ್ಟಂತೆ ನಿಮ್ಮ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿತ್ತು.
ಆ ಪ್ರಕರಣದ ತನಿಖೆ ಸರಿಯಾಗಿ ನಡೆದರೆ ನೀವು ಜೈಲು ಪಾಲಾಗುತ್ತಿದ್ದಿರಲ್ಲವೇ?
ಆ ಭಯದಿಂದಲೇ, ಜೈಲು ವಾಸ ತಪ್ಪಿಸಿಕೊಳ್ಳಲು ಲೋಕಾಯುಕ್ತ ಸಂಸ್ಥೆಯನ್ನೇ ಉಸಿರುಗಟ್ಟಿಸಿದಿರಿ.#CONgressPSIToolkit
— BJP Karnataka (@BJP4Karnataka) April 26, 2022
ಅಧಿಕಾರದಲ್ಲಿದ್ದಾಗಲೇ ಲೋಕಾಯುಕ್ತ ಸಂಸ್ಥೆಯನ್ನು ಸಿದ್ದರಾಮಯ್ಯ ಅವರು ಅಂಗವಿಕಲಗೊಳಿಸಿದರು. #ಬುರುಡೆರಾಮಯ್ಯ ಅವರೇ, ನಿಮ್ಮ ಸುತ್ತಲೂ ಇರುವ ಪರ್ಸೆಂಟೇಜ್ ಕುಳಗಳನ್ನು ರಕ್ಷಣೆ ಮಾಡಲು ಈ ಕೆಲಸ ಮಾಡಿದ್ದೇ? ಭ್ರಷ್ಟಾಚಾರಕ್ಕೆ ಹಿಂಬಾಗಿಲ ಮೂಲಕ ಪ್ರೋತ್ಸಾಹಿಸಿದ #ಮೀರ್‌ಸಾದಿಕ್ ಇಂದು ಸೊಬಗನಂತೆ ವರ್ತಿಸುತ್ತಿದ್ದಾರೆ.
ಮಾನ್ಯ ಸಿದ್ದರಾಮಯ್ಯ ಅವರೇ ಅರ್ಕಾವತಿ ಕರ್ಮಕಾಂಡಕ್ಕೆ ಸಂಬಂಧಪಟ್ಟಂತೆ ನಿಮ್ಮ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿತ್ತು. ಆ ಪ್ರಕರಣದ ತನಿಖೆ ಸರಿಯಾಗಿ ನಡೆದರೆ ನೀವು ಜೈಲು ಪಾಲಾಗುತ್ತಿದ್ದಿರಲ್ಲವೇ? ಆ ಭಯದಿಂದಲೇ, ಜೈಲು ವಾಸ ತಪ್ಪಿಸಿಕೊಳ್ಳಲು ಲೋಕಾಯುಕ್ತ ಸಂಸ್ಥೆಯನ್ನೇ ಉಸಿರುಗಟ್ಟಿಸಿದಿರಿ.
ಸಿದ್ದರಾಮಯ್ಯ ಅವರೇ, ಗೋವಿಂದರಾಜ್ ಡೈರಿಯಲ್ಲಿ ನಿಮ್ಮ ಪರ್ಸಂಟೇಜ್ ವ್ಯವಹಾರದ ಲೆಕ್ಕವಿತ್ತೇ? ಅಡಿಯಿಂದ ಮುಡಿಯವರೆಗೂ ಭ್ರಷ್ಟಾಚಾರವನ್ನು ಹೊದ್ದು ಮಲಗಿದ ಸರ್ಕಾರ ನಿಮ್ಮದಾಗಿತ್ತು ಎಂಬುದು ಡೈರಿಯೇ ಹೇಳುತ್ತಿತ್ತು. ತಾನು ಕಳ್ಳ ಪರರ ನಂಬ ಎಂಬ ಮಾತು ಸಿದ್ದರಾಮಯ್ಯ ಅವರಿಗೆ ಹೇಳಿ ಮಾಡಿಸಿದ ಹಾಗಿದೆ ಎಂದು ಬಿಜೆಪಿ ಟ್ವೀಟ್ ಮಾಡಿದೆ. bjp-“Siddaramaiah is the father of percentage in Karnataka state”