ಬೆಂಗಳೂರು: ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಹುದ್ದೆಗೆ ಚರ್ಚೆಗಳು ನಡೆಯುತ್ತಿದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರು ಮುಂಚೂಣಿಯಲ್ಲಿದೆ.
ಬಿಜೆಪಿಗೆ ಇನ್ನೆರಡು ದಿನಗಳಲ್ಲಿ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ಹೀಗಾಗಿ ಹಲವಾರು ಹೆಸರುಗಳು ಚರ್ಚೆಯಲ್ಲಿವೆ. ಬಿಜೆಪಿಯು ಸ್ತ್ರೀಶಕ್ತಿ ಅಸ್ತ್ರ್ರ ಪ್ರಯೋಗಿಸುತ್ತಾ ಎಂಬ ಪ್ರಶ್ನೆ ಮೂಡುತ್ತಿದೆ.
ರಾಜ್ಯಾಧ್ಯಕ್ಷರಾದವರು ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನ ಎಲ್ಲ ನಾಯಕರನ್ನು ಎದುರಿಸಬೇಕು. ಸ್ವಪಕ್ಷೀಯ ಬಣಗಳ ಕಿತ್ತಾಟಕ್ಕೂ ಬ್ರೇಕ್ ಹಾಕಬೇಕು. ಹೀಗಾಗಿ ಹೆಸರುಗಳು ಲೆಕ್ಕಾಚಾರ ಬಿಜೆಪಿ ಪಾಳಯದಲ್ಲಿ ನಡೆಯುತ್ತಿದೆ.
ಮಂಗಳವಾರ ಅಥವಾ ಬುಧವಾರದ ಒಳಗೆ ರಾಜ್ಯಾಧ್ಯಕ್ಷರ ಆಯ್ಕೆ ಪ್ರಕಟವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ಶೋಭಾ ಕರಂದ್ಲಾಜೆ ಹೆಸರು ಮುಂಚೂಣಿಯಲ್ಲಿದೆ.