ಬೆಂಗಳೂರು: ಬಿಜೆಪಿಯ ಆಂತರಿಕ ಸಂಘರ್ಷ ಮತ್ತೆ ಉದ್ಭವವಾಗಿದೆ. ಇತ್ತೀಚೆಗಷ್ಟೇ ಹಿರಿಯ ನಾಯಕರ ಮಧ್ಯಪ್ರವೇಶದಿಂದ ಶಮನವಾಯಿತು ಎನ್ನುವಷ್ಟರಲ್ಲೇ ಮತ್ತೆ ಬೂದಿ ಮುಚ್ಚಿದ ಕೆಂಡದಂತಿದ್ದ ಭಿನ್ನಮತ ಸ್ಫೋಟವಾಗಿದೆ. ಈ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೈಕಮಾಂಡ್ ಭೇಟಿ ಮಾಡಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿ ಮಾಡಿ ದೂರು ನೀಡಿದ್ದಾರೆ ಎನ್ನಲಾಗಿದೆ. ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ಟೀಂಗೆ ಬ್ರೇಕ್ ಹಾಕುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಭೇಟಿಯ ಸಂದರ್ಭದಲ್ಲಿ ರಾಜ್ಯದಲ್ಲಾದ ಪಕ್ಷ ಸಂಘಟನೆ, ಹೋರಾಟದ ಕುರಿತು ಕೂಡ ವರದಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ವೇಳೆ ಯತ್ನಾಳ್ ಹಾಗೂ ತಂಡದ ಹೋರಾಟದ ಕುರಿತು ಕೂಡ ಹೈಕಮಾಂಡ್ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ.
ಈ ವರ್ಷಾರಂಭದಿಂದ ಪಕ್ಷದ ವತಿಯಿಂದ ಕೈಗೊಳ್ಳಲಿರುವ ಹೋರಾಟಗಳ ಬಗ್ಗೆ ಪ್ರತ್ಯೇಕ ವರದಿ ಕೂಡ ಸಲ್ಲಿಸಿದ್ದಾರೆ. ಸಚಿನ್ ಆತ್ಮಹತ್ಯೆ ಪ್ರಕರಣಕ್ಕೂ ಪ್ರಿಯಾಂಕ್ ಖರ್ಗೆಗೂ ಸಂಬಂಧ ಇರುವ ಕುರಿತು ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!
ಬೆಂಗಳೂರು: ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಮತ್ತು ಅಧಿಕಾರ ಹಸ್ತಾಂತರದ ಚರ್ಚೆಗಳು ಗರಿಗೆದರಿವೆ. ಕರ್ನಾಟಕದಲ್ಲಿ ಪ್ರಭಾವಿ ಸಿಎಂ ಇದ್ದಾರೆ, ಸದ್ಯಕ್ಕೆ ಸಿಎಂ ಹುದ್ದೆ ಖಾಲಿ...








