–ನಾನು ಬಸವಕಲ್ಯಾಣ ಕ್ಷೇತ್ರದ ಅಭ್ಯರ್ಥಿಯಲ್ಲ-
ಬೀದರ್: ಮಂಡ್ಯದ ಕೆ.ಆರ್ ನಗರ ಬಳಿಕ ಶಿರಾ ಕ್ಷೇತ್ರವನ್ನು ಬಿಜೆಪಿ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿರುವ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಈಗ ಬಸವಕಲ್ಯಾಣ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ.
ಸದ್ಯದಲ್ಲೇ ಬಸವಕಲ್ಯಾಣ ವಿಧಾನಸಭೆ ಉಪಚುನಾವಣೆಗೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಗುರುವಾರ ಬೆಂಗಳೂರಿನಿಂದ ಹೊರಟಿದ್ದ ವಿಜಯೇಂದ್ರ ಶುಕ್ರವಾರ ಬೆಳಿಗ್ಗೆ ಬಸವ ಕಲ್ಯಾಣ ತಲುಪಿದ್ದಾರೆ.
ಬಸವ ಕಲ್ಯಾಣದಲ್ಲೂ ಮ್ಯಾಜಿಕ್ ಮಾಡಲು ಕ್ಷೇತ್ರದ ಮತದಾರರ ನಾಡಿ ಮಿಡಿತ ಅರಿಯಲಿರುವ ವಿಜಯೇಂದ್ರ, ಕೆಲ ದಿನಗಳ ಕಾಲ ಬಸವ ಕಲ್ಯಾಣದಲ್ಲೇ ಠಿಕಾಣಿ ಹೂಡಲಿದ್ದಾರೆ.
ಬಸವಕಲ್ಯಾಣ ತಲುಪಿದ ಮೇಲೆ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ವಿಜಯೇಂದ್ರ, ಮಸ್ಕಿ, ಬಸವಕಲ್ಯಾಣ ಉಪಚುನಾವಣೆ ಬಿಜೆಪಿಗೆ ಸವಾಲಾಗಿದೆ. ಈ ಸವಾಲನ್ನು ಬಿಜೆಪಿ ಬಹಳ ಗಂಭೀರವಾಗಿ ಪರಿಗಣಿಸಿದೆ. ಗೆಲ್ಲುವ, ಸರ್ವಸಮ್ಮತ ಅಭ್ಯರ್ಥಿಗಳನ್ನು ಬಿಜೆಪಿ ಆಯ್ಕೆ ಮಾಡಲಿದೆ ಎಂದರು.
ನಾನು ಬಸವಕಲ್ಯಾಣ ಕ್ಷೇತ್ರದ ಅಭ್ಯರ್ಥಿಯಲ್ಲ..
ನಾನು ಬಸವಕಲ್ಯಾಣ ಕ್ಷೇತ್ರದ ಅಭ್ಯರ್ಥಿಯಲ್ಲ, ಈ ಬಗ್ಗೆ ಸಿಎಂ ಯಡಿಯೂರಪ್ಪ ಅವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಬಿಜೆಪಿಯಿಂದ ಬಸವಕಲ್ಯಾಣದಲ್ಲಿ ಯಾರೇ ಸ್ಪರ್ಧಿಸಿದರೂ ಗೆಲ್ಲುತ್ತಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕಟಿಲ್ ಅವರು ಏನು ಗುರಿ ಕೊಡುತ್ತಾರೆ, ಆ ಗುರಿ ತಲುಪುತ್ತೇನೆ. ಭಾರತೀಯ ಜನತಾ ಪಾರ್ಟಿಯ ಮ್ಯಾಜಿಕ್ ಬಸವಕಲ್ಯಾಣ, ಮಸ್ಕಿ ಉಪಚುನಾವಣೆಯಲ್ಲೂ ನಡೆಯಲಿದೆ ಎಂದು ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಈವರೆಗೆ ಗೆದ್ದಿರಲಿಲ್ಲ. ಅಲ್ಲಿ ಜನ ಈಗ ಬಿಜೆಪಿಗೆ ಮತ ನೀಡಿದ್ದಾರೆ. ಜಾತಿ ರಾಜಕಾರಣ ಮಾಡುವವರೆಗೆ ಮೊನ್ನೆಯ ಉಪಚುನಾವಣೆ ಫಲಿತಾಂಶ ತಕ್ಕ ಉತ್ತರ ಕೊಟ್ಟಿದೆ. ಹೀಗಾಗಿ ಶಿರಾ ಕ್ಷೇತ್ರದ ಗೆಲುವು ಅಲ್ಲಿನ ಕಾರ್ಯಕರ್ತರಿಗೆ ಸಲ್ಲುತ್ತದೆ ಎಂದಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel