BJP | ಆಪರೇಷನ್ ಕಮಲದ ಮೂಲಕ ಸಂವಿಧಾನದ ಶಿರಚ್ಛೇಧ
ಬೆಂಗಳೂರು : ಒಂದೆಡೆ, ಸಂಸತ್ತು-ಸಂವಿಧಾನಕ್ಕೆ ಶಿರಸಾಷ್ಟಾಂಗ ನಮಸ್ಕಾರ! ಇನ್ನೊಂದೆಡೆ; ಆಪರೇಷನ್ ಕಮಲದ ಮೂಲಕ ಸಂವಿಧಾನದ ಶಿರಚ್ಛೇಧ!! ಇದೆಂಥಾ ರಾಜಕಾರಣ? ಇದು ರಾಷ್ಟ್ರೀಯವಾದಿ ಪಕ್ಷದ ಸೋಗಲಾಡಿತನ ಎಂದು ಬಿಜೆಪಿ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ “ಕುಟುಂಬ ಆಧರಿತ ಪಕ್ಷಗಳು ದೇಶಕ್ಕೆ ಮತ್ತು ಯುವಜನರ ಪಾಲಿಗೆ ದೊಡ್ಡ ಶತ್ರು. ಇದು ರಾಜಕಾರಣದ ದೊಡ್ಡ ಸಮಸ್ಯೆಯೂ ಹೌದು” ಎಂಬ ಹೇಳಿಕೆಗೆ ಕುಮಾರಸ್ವಾಮಿ ಟ್ವಿಟ್ಟರ್ ನಲ್ಲಿ ಆಕ್ರೋಶ ಹೊರಹಾಕಿದ್ದಾರೆ.
ಮುಖ್ಯಮಂತ್ರಿ ಸ್ಥಾನವನ್ನು ಕರ್ನಾಟಕದಲ್ಲಿ ಮಾರಾಟಕ್ಕೆ ಇಟ್ಟಿದ್ದು ಯಾರು? ಕುಟುಂಬ ರಾಜಕಾರಣದ ಪಕ್ಷವೋ? ಬಿಜೆಪಿಯೋ? “ರೂ.2,500 ಕೋಟಿ ಕೊಡಿ, ನಿಮ್ಮನ್ನು ಸಿಎಂ ಮಾಡುತ್ತೇವೆ” ಎಂದು ಕೇಳಿದ ಪಾರ್ಟಿ ಬಿಜೆಪಿ. ಇದನ್ನು ಹೇಳಿದ್ದು ನಾವಲ್ಲ, ಸ್ವತಃ ಬಿಜೆಪಿ ಶಾಸಕರೇ!! ಆ ಶಾಸಕರ ಮೇಲೆ ಶಿಸ್ತುಕ್ರಮ ಇರಲಿ, ಒಂದು ನೊಟೀಸನ್ನೂ ಕೊಡಲಿಲ್ಲ.
ಹೋಗಲಿ.. ಮೋದಿ ಅವರೂ ಸಿಎಂ ಕರ್ಚಿ ಮಾರಾಟದ ಬಗ್ಗೆ ಮಾತನಾಡಲಿಲ್ಲ. ಈ ಘನಘೋರ ಆರೋಪದ ಬಗ್ಗೆಯೂ ಅವರದ್ದು ಮುಂದುವರಿದ ಮೌನ! ಅಲ್ಲಿಗೆ ಶಾಸಕರ ಹೇಳಿಕೆ ಸತ್ಯ ಎಂದಾಯಿತಲ್ಲ.
ಪಿಎಸ್ʼಐ ಹುದ್ದೆಗಳಂತೆ ಸಿಎಂ ಪದವಿಯನ್ನೂ ಮಾರಿಕೊಳ್ಳುವುದು ದೇಶಕ್ಕೆ ಸೌಭಾಗ್ಯವಾ? ಯುವಕರಿಗೆ ಆದರ್ಶವಾ? 16/17— H D Kumaraswamy (@hd_kumaraswamy) May 27, 2022
ಹೋಗಲಿ.. ಮೋದಿ ಅವರೂ ಸಿಎಂ ಕರ್ಚಿ ಮಾರಾಟದ ಬಗ್ಗೆ ಮಾತನಾಡಲಿಲ್ಲ. ಈ ಘನಘೋರ ಆರೋಪದ ಬಗ್ಗೆಯೂ ಅವರದ್ದು ಮುಂದುವರಿದ ಮೌನ! ಅಲ್ಲಿಗೆ ಶಾಸಕರ ಹೇಳಿಕೆ ಸತ್ಯ ಎಂದಾಯಿತಲ್ಲ. ಪಿಎಸ್ʼಐ ಹುದ್ದೆಗಳಂತೆ ಸಿಎಂ ಪದವಿಯನ್ನೂ ಮಾರಿಕೊಳ್ಳುವುದು ದೇಶಕ್ಕೆ ಸೌಭಾಗ್ಯವಾ? ಯುವಕರಿಗೆ ಆದರ್ಶವಾ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಕುಟುಂಬ ರಾಜಕಾರಣದ ನೆಪವೊಡ್ಡಿ ಪ್ರಾದೇಶಿಕ ಪಕ್ಷಗಳನ್ನು ಮುಗಿಸುವ ತಂತ್ರ ಫಲಿಸದು. ಭಾರತವೆಂದರೆ; ಬಿಜೆಪಿಯಷ್ಟೇ ಅಲ್ಲ, 140 ಕೋಟಿಗೂ ಹೆಚ್ಚು ಭಾರತೀಯರು ಸೇರಿದರೆ ಮಾತ್ರ ಭಾರತ. ಪ್ರಧಾನಿಗಳು ಈ ಆಶಯವನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂದು ನಂಬಿದ್ದೇನೆ ಎಂದು ಬರೆದುಕೊಂಡಿದ್ದಾರೆ BJP The beheading of the Constitution by Operation Lotus