2023ರಲ್ಲೂ ಬಿಜೆಪಿ ಅಧಿಕಾರಕ್ಕೆ ಬರುತ್ತೆ : ಪ್ರತಾಪ್ ಸಿಂಹ BJP saaksha tv
ಮೈಸೂರು : 2023ರಲ್ಲೂ ಬಿಜೆಪಿಯೇ ಅಧಿಕಾರಕ್ಕೆ ಬರುತ್ತದೆ ಎಂದು ಸಂಸದ ಪ್ರತಾಪ್ ಸಿಂಹ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮತಾಂತರ ಕಾಯ್ದೆ ವಾಪಸ್ಸು ಪಡೆಯುವ ವಿಚಾರವಾಗಿ ಮಾತನಾಡಿದ ಪ್ರತಾಪ್ ಸಿಂಹ, ಇಂತಹ ಮನಸ್ಥಿತಿಯಿಂದಲೇ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದೆ.
ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಾಲಿಬಾನ್ ಮಾದರಿ ಸರ್ಕಾರವಾಗುತ್ತದೆ. ಇದು ಜನರಿಗೆ ಗೊತ್ತಿದೆ ಆದ್ದರಿಂದ ಮುಂದೆಯೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ.
2023ರಲ್ಲೂ ಬಿಜೆಪಿಯೇ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕ್ರಿಶ್ಚಿಯನಿಟಿ ಏನು ಮಾರುಕಟ್ಟೆಯ ವಸ್ತುನಾ.? ನೀವು ಟ್ರೈ ಮಾರಿ ನಾವು ಮೇರಿ ಅನ್ನೋಕೆ.? ಇದೇನು ಸೋಪು ಮಾರಾಟನಾ.? ಎಂದು ಪ್ರತಾಪಸಿಂಹ ಪ್ರಶ್ನಿಸಿದರು.
ನಿಮ್ಮ ಧರ್ಮವನ್ನು ಮಾರುಕಟ್ಟೆ ವಸ್ತು ಮಾಡಬೇಡಿ. ಮೋಸದಿಂದ ಮತಾಂತರ ಮಾಡಬೇಡಿ ಎಂದು ಮನವಿ ಮಾಡಿಕೊಂಡರು.
ಸಿದ್ದರಾಮಯ್ಯ ಬರೀ ಹಿಟ್ ಅಂಡ್ ರನ್ ಮಾಡ್ತಾರೆ. ಒಂದು ವಿಚಾರ ತೆಗೆದುಕೊಳ್ಳುತ್ತಾರೆ ಅರ್ಧಕ್ಕೆ ಬಿಡುತ್ತಾರೆ. ಮತ್ತೆ ಅಲ್ಲಿಂದ ಓಡಿ ಹೋಗುತ್ತಾರೆ.
ಮತಾಂತರ ನಿಷೇಧ ಕಾಯ್ದೆಗೆ ಅವರೇ ಸಹಿ ಹಾಕಿದ್ದರು. ಇಲ್ಲ ಅಂತಾ ಹೇಳಿ ಅಲ್ಲೂ ಸಿಕ್ಕಿಕೊಂಡರು. ನಂತರ ಕಣ್ಣು ತಪ್ಪಿನಿಂದ ಅದು ಇದು ಅಂತಾ ಹೇಳಿದರು.
ಸಿದ್ದರಾಮಯ್ಯ ಯಾವುದನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುವುದಿಲ್ಲ. ಮಹಾರಾಷ್ಟ್ರಕ್ಕೆ ಹೆದರಿಕೊಳ್ಳುವ ಕಾಂಗ್ರೆಸ್ನಿಂದ ನಮಗೆ ಪಾಠ ಕಲಿಯುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.









