ನವೆಂಬರ್ 18 ರಿಂದ ರಾಜ್ಯಾದ್ಯಂತ ಬಿಜೆಪಿ ಪ್ರವಾಸ

1 min read
Siddaramaiah saaksha tv

ನವೆಂಬರ್ 18 ರಿಂದ ರಾಜ್ಯಾದ್ಯಂತ ಬಿಜೆಪಿ ಪ್ರವಾಸ

ಬೆಂಗಳೂರು : ಮುಂದಿನ ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಈಗಾಗಲೇ ತಯಾರಿ ಆರಂಭಿಸಿದೆ.

2023ರ ಸಾರ್ವತ್ರಿಕ ಚುನಾವಣೆಗೆ ಪಕ್ಷ ಸಂಘಟಿಸುವ ಉದ್ದೇಶದಿಂದ ಇದೇ 18 ರಿಂದ ರಾಜ್ಯಾದ್ಯಂತ ಬಿಜೆಪಿ ಪ್ರವಾಸ ಕೈಗೊಳ್ಳಲಿದೆ.

ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾತಿ ಮಾಹಿತಿ ನೀಡಿದ್ದಾರೆ. ನಿನ್ನೆ ರಾಜ್ಯ ಬಿಜೆಪಿಯ ಸಮನ್ವಯ ಸಮಿತಿ ಸಭೆ ಪಕ್ಷದ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ನಡೆಯಿತು.

ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ರಾಷ್ಟ್ರೀಯ ಉಪಾಧ್ಯಕ್ಷರಾದ ಅರುಣಾ ಕುಮಾರಿ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,

ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಡಿ.ವಿ. ಸದಾನಂದಗೌಡ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ,

BJP SAAKSHA TV

ಸಚಿವರಾದ ಗೋವಿಂದ ಕಾರಜೋಳ, ಕೆ.ಎಸ್. ಈಶ್ವರಪ್ಪ, ಆರ್. ಅಶೋಕ, ಶ್ರೀರಾಮುಲು, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಸೇರಿದಂತೆ ಅನೇಕರು ಸಭೆಯಲ್ಲಿ ಭಾಗವಹಿಸಿದ್ದರು.

ಸಭೆಯ ಬಳಿಕ ಬೊಮ್ಮಾಯಿ ಮಾತನಾಡಿ, ವಿಧಾನಪರಿಷತ್ತಿನ 25 ಸ್ಥಾನಗಳಿಗೆ ನಡೆಯುವ ಚುನಾವಣೆ ಸೇರಿದಂತೆ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಲಾಗಿದೆ.

ಈಗಾಗಲೇ ಜಿಲ್ಲಾವಾರು ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಅಭಿಪ್ರಾಯ ಸಂಗ್ರಹಿಸಲಾಗಿದೆ.

ಸಭೆಯಲ್ಲಿ ಚರ್ಚಿಸಿದಂತೆ ಇನ್ನೂ ಕೆಲವು ವಿಚಾರಗಳ ಬಗ್ಗೆ ಮಾಹಿತಿ ಪಡೆಯುವ ಉದ್ದೇಶದಿಂದ ಇದೇ 18ರಿಂದ ರಾಜ್ಯಾದ್ಯಂತ ನಾಲ್ಕು ತಂಡಗಳು ಪ್ರವಾಸ ಕೈಗೊಂಡು ಸ್ಥಳೀಯ ಮುಖಂಡರೊಂದಿಗೆ ಮಾತುಕತೆ ನಡೆಸಿ, ಇನ್ನೆರಡು ದಿನಗಳಲ್ಲಿ ಪಟ್ಟಿ ಅಂತಿಮಗೊಳಿಸಲಾಗುವುದು, ಈ ಪಟ್ಟಿಯನ್ನು ಸಂಸದೀಯ ಮಂಡಳಿಗೆ ಕಳುಹಿಸಿಕೊಡಲಾಗುವುದು ಎಂದು ತಿಳಿಸಿದರು.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd