BJP | ತಾನು ಕಳ್ಳ ಪರರ ನಂಬೆ ಎಂಬ ಧೋರಣೆಯೇ ಕಾಂಗ್ರೆಸ್ ಅಸ್ಮಿತೆ
ಬೆಂಗಳೂರು : ನಕಲಿ ಗಾಂಧಿ ಮನೆತನದಿಂದ, ನಕಲಿ ಗಾಂಧಿ ಮನೆತನಕ್ಕಾಗಿ, ನಕಲಿ ಗಾಂಧಿ ಮನೆತನಕ್ಕೋಸ್ಕರ, ಇದು ಕಾಂಗ್ರೆಸ್ ಪಕ್ಷದ ಪ್ರಜಾಪ್ರಭುತ್ವ ಎಂದು ರಾಜ್ಯ ಬಿಜೆಪಿ ಘಟಕ ಕುಟುಕಿದೆ.
ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇಂದು ಜಾರಿ ನಿರ್ದೇಶನಾಲಯ ಎದುರು ವಿಚಾರಣೆಗೆ ಹಾಜರಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ರಾಹುಲ್ ವಿಚಾರಣೆ ಖಂಡಿಸಿ, ಡೆಲ್ಲಿಯ ಇಡಿ ಮುಖ್ಯ ಕಚೇರಿ ಹಾಗೂ ದೇಶದ ವಿವಿಧ ಇಡಿ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಲು ಮುಂದಾಗಿದೆ.

ಈ ಹಿನ್ನೆಲೆಯಲ್ಲಿ ಬಿಜೆಪಿ ಸರಣಿ ಟ್ವೀಟ್ ಗಳ ಮೂಲಕ ಕಿಡಿಕಾರಿದೆ.
ಬಿಜೆಪಿ ತನ್ನ ಟ್ವೀಟ್ ನಲ್ಲಿ…
ದೇಶಕ್ಕಾಗಿ ಮಡಿವ ಸೈನಿಕರ ಪರವಾಗಿ ಒಮ್ಮೆಯೂ ಕಾಂಗ್ರೆಸ್ ದನಿ ಎತ್ತಲಿಲ್ಲ. ರೈತರು ಆತ್ಮಹತ್ಯೆ ಮಾಡಿಕೊಂಡಾಗಲೂ ಕಾಂಗ್ರೆಸ್ ಬೀದಿಗೆ ಬರಲಿಲ್ಲ. ಆದರೆ ನಕಲಿ ಗಾಂಧಿಗಳಿಗೆ #EDNotice ನೀಡಿದರೆ ಕಾಂಗ್ರೆಸ್ ರಸ್ತೆಗೆ ಬಂದು ನಿಂತಿದೆ. ಇದು ಸಂವಿಧಾನಕ್ಕೆಸಗುತ್ತಿರುವ ಅಪಚಾರವಲ್ಲವೇ?
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ #ED ನಕಲಿ ಗಾಂಧಿ ಕುಟುಂಬದ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ. ತಪ್ಪು ಮಾಡದೇ ಇದ್ದರೆ ಭಯವೇಕೆ? ಸಹಾನುಭೂತಿ ಗಿಟ್ಟಿಸುವುದಕ್ಕಾಗಿ ಕಾಂಗ್ರೆಸ್ ಪ್ರತಿಭಟನೆಯ ನಾಟಕ ಹೆಣೆಯುತ್ತಿದೆ. ಇದೊಂದು ಯೋಜಿತ ಸಂಚು ಅಷ್ಟೇ!
ತಪ್ಪು ಮಾಡದವರು ಯಾರು ಎಂದು ಒಪ್ಪಿಕೊಂಡು ತನಿಖೆ ಎದುರಿಸುವ ಮುಕ್ತ ಮನಸ್ಸು ನಕಲಿ ಗಾಂಧಿ ಕುಟುಂಬಕ್ಕಿಲ್ಲ. ತಪ್ಪು ಮಾಡದೇ ಇದ್ದರೆ ತನಿಖೆಯ ಅಗ್ನಿ ಪರೀಕ್ಷೆ ಎದುರಿಸಲು ಭಯವೇಕೆ? ಅಷ್ಟಕ್ಕೂ ತನಿಖೆ ಬೇಡ ಎನ್ನಲು, ನಕಲಿ ಗಾಂಧಿ ಕುಟುಂಬವನ್ನು ಹೊರಗಿಟ್ಟು ಭಾರತೀಯ ದಂಡ ಸಂಹಿತೆ ರಚಿಸಲಾಗಿದೆಯೇ?
https://twitter.com/BJP4Karnataka/status/1536212816872771584?s=20&t=6NrZ4m5fSSE8xrwU3rB3gQ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ನಕಲಿ ಗಾಂಧಿ ಕುಟುಂಬ ಈಗ “ಅನುಕಂಪ” ಗಿಟ್ಟಿಸುವ ನಾಟಕವಾಡುತ್ತಿದೆ. ತಾನು ಕಳ್ಳ ಪರರ ನಂಬೆ ಎಂಬ ಧೋರಣೆಯೇ ಕಾಂಗ್ರೆಸ್ ಅಸ್ಮಿತೆ. ನಕಲಿ ಗಾಂಧಿ ಮನೆತನದಿಂದ, ನಕಲಿ ಗಾಂಧಿ ಮನೆತನಕ್ಕಾಗಿ, ನಕಲಿ ಗಾಂಧಿ ಮನೆತನಕ್ಕೋಸ್ಕರ, ಇದು ಕಾಂಗ್ರೆಸ್ ಪಕ್ಷದ ಪ್ರಜಾಪ್ರಭುತ್ವ!
ನಕಲಿ ಗಾಂಧಿ ಕುಟುಂಬದ ಸದಸ್ಯರಿಗೆ #ED ನೋಟಿಸ್ ಜಾರಿಯಾಗುತ್ತಿದ್ದಂತೆ ದೇಶಾದ್ಯಂತ ಅಶಾಂತಿ ಸೃಷ್ಟಿ ಮಾಡಲಾಗುತ್ತಿದೆ. ಇಡಿ ಕಚೇರಿ ಎದುರು ಪ್ರತಿಭಟನೆಯ ಕರೆಯ ಹಿಂದೆ ದೇಶ ವಿರೋಧಿ ಸಂಚು ಅಡಗಿದೆ. ಉತ್ತರದ ರಾಜ್ಯಗಳಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಹೋರಾಟವನ್ನು ಕಾಂಗ್ರೆಸ್ ಕರ್ನಾಟಕಕ್ಕೆ ಆಹ್ವಾನಿಸುತ್ತಿದೆ ಎಂದು ಬಿಜೆಪಿ ಬರೆದುಕೊಂಡಿದೆ.