BJP TWEET | ಸಿದ್ದರಾಮಯ್ಯಗೆ ಕಾಂಗ್ರೆಸ್ ಪಕ್ಷದ ಎಲ್ಲಾ ವ್ಯವಹಾರಗಳಿಂದ ಗೇಟ್ ಪಾಸ್

1 min read
Siddaramaiah Saaksha Tv

BJP TWEET | ಸಿದ್ದರಾಮಯ್ಯಗೆ ಕಾಂಗ್ರೆಸ್ ಪಕ್ಷದ ಎಲ್ಲಾ ವ್ಯವಹಾರಗಳಿಂದ ಗೇಟ್ ಪಾಸ್

ಬೆಂಗಳೂರು : ಸಿದ್ದರಾಮಯ್ಯ ಅವರನ್ನು ಸಂಘಟನಾತ್ಮಕವಾಗಿ ಪಕ್ಷದಿಂದ ದೂರವಿಡುವ ಪ್ರಯತ್ನ ಆರಂಭವಾಗಿದೆ ಎಂದು ರಾಜ್ಯ ಬಿಜೆಪಿ ಕುಟುಕಿದೆ.

 ರಾಜ್ಯ ಕಾಂಗ್ರೆಸ್ ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಏಕಾಂಗಿ ಆಗುತ್ತಿದ್ದಾರಾ..? ಎಂಬ ಪ್ರಶ್ನೆ ಸದ್ಯ ರಾಜ್ಯ ರಾಜಕೀಯ ಪಡಸಾಲೆಯಲ್ಲಿ ಹರಿದಾಡುತ್ತಿದೆ. ಯಾಕಂದರೆ ಕಳೆದ ಕೆಲ ದಿನಗಳಿಂದ ರಾಜ್ಯ ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿ ಇಲ್ಲ ಎಂಬೋದನ್ನ ಸಾರಿ ಹೇಳುವ ಘಟನೆಗಳು ನಡೆಯುತ್ತಿವೆ.

ಮುಖ್ಯವಾಗಿ ಹಿಜಾಬ್ ವಿಚಾರವಾಗಿ ಸಿದ್ದರಾಮಯ್ಯ ನಿಲುವನ್ನ ಪಕ್ಷದಲ್ಲಿ ಸಂಪೂರ್ಣವಾಗಿ ಕಡೆಗಣಿಸಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಇದರ ಬೆನ್ನಲ್ಲೆ ಸ್ವಾಮೀಜಿಗಳ ವಿಚಾರವಾಗಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ವಿಚಾರವಾಗಿಯೂ ಕಾಂಗ್ರೆಸ್ ಶಾಸಕರು ಯಾರು ಕೂಡ ಸಿದ್ದು ಪರ ಮಾತನಾಡಿಲ್ಲ. ಹೀಗಾಗಿ ಸಿದ್ದರಾಮಯ್ಯ ಕಾಂಗ್ರೆಸ್ ನಲ್ಲಿ ಮೂಲೆ ಗುಂಪಾಗುತ್ತಿದ್ದಾರೆ ಎಂದು ಅಂದಾಜಿಸಲಾಗುತ್ತಿದೆ.

bjp-tweet- siddaramaiah photo miss in congress banner saaksha tv

ಇದಕ್ಕೆ ಪುಷ್ಠಿ ನೀಡುವಂತೆ ಇದೀಗ   ಮಹಾದೇವಪುರ ಕ್ಷೇತ್ರದ ಡಿಜಿಟಲ್ ಸದಸ್ಯತ್ವ ನೋಂದಣಿ ಪ್ರಗತಿ ಪರಿಶೀಲನೆಯ ಪೋಸ್ಟರ್‌ನಲ್ಲಿ ಸಿದ್ದರಾಮಯ್ಯ ಭಾವಚಿತ್ರ ಮಿಸ್ ಆಗಿದೆ.  ಇದು ಚರ್ಚೆಗೆ ಕಾರಣವಾಗಿದೆ. ಯಾಕಂದ್ರೆ ಸಿದ್ದರಾಮಯ್ಯ ಸದ್ಯದ ಕಾಂಗ್ರೆಸ್ ನ ಮಾಸ್ ಲೀಡರ್, ಜೊತೆಗೆ ವಿಪಕ್ಷ ನಾಯಕ. ಹೀಗಿದ್ದರೂ ಪಕ್ಷದ ಪೋಸ್ಟರ್ ನಲ್ಲಿ ಅವರ ಫೋಟೋ ಮಿಸ್ ಆಗಿರೋದು ಹಲವು ಚರ್ಚೆಗಳಿಗೆ ಕಾರಣವಾಗಿದೆ.

ಈ ಫೋಟೋವನ್ನು ಶೇರ್ ಮಾಡಿರುವ ಬಿಜೆಪಿ,  ಸಿದ್ದರಾಮಯ್ಯ ಅವರನ್ನು ಸಂಘಟನಾತ್ಮಕವಾಗಿ ಪಕ್ಷದಿಂದ ದೂರವಿಡುವ ಪ್ರಯತ್ನ ಆರಂಭವಾಗಿದೆ.  ಮಹಾದೇವಪುರ ಕ್ಷೇತ್ರದ ಡಿಜಿಟಲ್ ಸದಸ್ಯತ್ವ ನೋಂದಣಿ ಪ್ರಗತಿ ಪರಿಶೀಲನೆಯ ಪೋಸ್ಟರ್‌ನಲ್ಲಿ ಸಿದ್ದರಾಮಯ್ಯ ಭಾವಚಿತ್ರಕ್ಕೆ ಅವಕಾಶವಿಲ್ಲ.  ಸಿದ್ದರಾಮಯ್ಯ ಅವರಿಗೆ ಪಕ್ಷದ ಎಲ್ಲಾ ವ್ಯವಹಾರಗಳಿಂದ ಗೇಟ್ ಪಾಸ್ ನೀಡಲಾಗುತ್ತಿದೆಯೇ ಎಂದು ಕುಟುಕಿದೆ. bjp-tweet- siddaramaiah photo miss in congress banner

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd