BJP Tweet | ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ್ದೇ ಕಾಂಗ್ರೆಸ್ ಸಾಧನೆ
ಬೆಂಗಳೂರು : ರಾಷ್ಟ್ರ ಧ್ವಜದ ವಿಚಾರದಲ್ಲಿ ಬಿಜೆಪಿ ವಿರುದ್ಧ ಸುಳ್ಳು ಆರೋಪ ಮಾಡುವ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಮಾಡಿದ ದ್ರೋಹ ನೆನಪಿಲ್ಲವೇ? ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಧ್ವಜ ಹಾರಿಸಲು ಹೋದವರ ಮೇಲೆ ಗುಂಡು ಹಾರಿಸಲು ಆದೇಶ ನೀಡಿದ್ದು ಕಾಂಗ್ರೆಸ್ ಎನ್ನುವುದು ಮರೆತು ಹೋಯಿತೇ ಎಂದು ಕರ್ನಾಟಕ ಬಿಜೆಪಿ ಪ್ರಶ್ನಿಸಿದೆ.
ಮೈಸೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡುತ್ತಾ, ಹರ್ ಘರ್ ತಿರಂಗಾ ಹೆಸರಿನಲ್ಲಿ ಬಿಜೆಪಿಗರು ನಾಟಕ ಮಾಡುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು.
ಒಂದು ದೇಶದಲ್ಲಿ ಎರಡು ಧ್ವಜ, ಎರಡು ಪ್ರಧಾನಿ ನಡೆಯುವುದಿಲ್ಲ ಎಂಬ ನಮ್ಮ ಹೋರಾಟಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿತ್ತು.
ಕಾಶ್ಮೀರದ ಲಾಲ್ ಚೌಕ್, ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ರಾಷ್ಟ್ರ ಧ್ವಜ ಹಾರಿಸಲು ಕಾಂಗ್ರೆಸ್ ಅಡ್ಡಿಪಡಿಸಿತ್ತು.
ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ್ದೇ ಕಾಂಗ್ರೆಸ್ ಸಾಧನೆ.#ರಾಷ್ಟ್ರಧ್ವಜವಿರೋಧಿಕಾಂಗ್ರೆಸ್
— BJP Karnataka (@BJP4Karnataka) August 9, 2022
ಇದಕ್ಕೆ ಟ್ವಿಟ್ಟರ್ ನಲ್ಲಿ ಟಾಂಗ್ ಕೊಟ್ಟಿರುವ ಬಿಜೆಪಿ, ರಾಷ್ಟ್ರ ಧ್ವಜದ ವಿಚಾರದಲ್ಲಿ ಬಿಜೆಪಿ ವಿರುದ್ಧ ಸುಳ್ಳು ಆರೋಪ ಮಾಡುವ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಮಾಡಿದ ದ್ರೋಹ ನೆನಪಿಲ್ಲವೇ? ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಧ್ವಜ ಹಾರಿಸಲು ಹೋದವರ ಮೇಲೆ ಗುಂಡು ಹಾರಿಸಲು ಆದೇಶ ನೀಡಿದ್ದು ಕಾಂಗ್ರೆಸ್ ಎನ್ನುವುದು ಮರೆತು ಹೋಯಿತೇ? BJP Tweet The achievement of Congress is insulting the national flag

ಕಾಂಗ್ರೆಸ್ಸಿಗರು ಧ್ವಜದ ಹೆಸರಿನಲ್ಲಿ ನಡಿಗೆಗೆ ಹೊರಟಿರುವುದು ನಾಟಕವೋ ಅಥವಾ ರಾಜಕೀಯವೋ? ಕಾರ್ಯಕ್ರಮದ ಉದ್ಘಾಟನೆಗೆ ಪ್ರಿಯಾಂಕಾ ಗಾಂಧಿಯವರನ್ನು ಆಹ್ವಾನಿಸಲಾಗಿದೆ. ಸ್ವಾತಂತ್ರ್ಯದ ಹೋರಾಟವನ್ನು ಒಂದು ಕುಟುಂಬದ ಪದತಳಕ್ಕೆ ಇಡುವ ಪ್ರಯತ್ನವೇ ಇದು?
ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಗರ ಕೊಡುಗೆ ಏನು ಎಂದು ಪ್ರಶ್ನೆ ಮಾಡುವ ಸಿದ್ದರಾಮಯ್ಯನವರೇ, ಸ್ವಾತಂತ್ರ್ಯ ಹೋರಾಟದಲ್ಲಿ ನಿಮ್ಮ ಕೊಡುಗೆ ಏನು?
ಸಿದ್ದರಾಮಯ್ಯ ಹುಟ್ಟು ಹೋರಾಟಗಾರರೋ ಅಥವಾ ಜನನ ಪೂರ್ವದಲ್ಲೇ ಬ್ರಿಟಿಷರ ವಿರುದ್ಧ ಹೋರಾಡಿದ್ದೆ ಎಂದು ಹೊಸ ಸುಳ್ಳು ದಾಖಲೆ ಸೃಷ್ಟಿಸಿ ಇಟ್ಟುಕೊಂಡಿರಬಹುದೇ? #ರಾಷ್ಟ್ರಧ್ವಜವಿರೋಧಿಕಾಂಗ್ರೆಸ್
— BJP Karnataka (@BJP4Karnataka) August 9, 2022
ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಗರ ಕೊಡುಗೆ ಏನು ಎಂದು ಪ್ರಶ್ನೆ ಮಾಡುವ ಸಿದ್ದರಾಮಯ್ಯನವರೇ, ಸ್ವಾತಂತ್ರ್ಯ ಹೋರಾಟದಲ್ಲಿ ನಿಮ್ಮ ಕೊಡುಗೆ ಏನು? ಸಿದ್ದರಾಮಯ್ಯ ಹುಟ್ಟು ಹೋರಾಟಗಾರರೋ ಅಥವಾ ಜನನ ಪೂರ್ವದಲ್ಲೇ ಬ್ರಿಟಿಷರ ವಿರುದ್ಧ ಹೋರಾಡಿದ್ದೆ ಎಂದು ಹೊಸ ಸುಳ್ಳು ದಾಖಲೆ ಸೃಷ್ಟಿಸಿ ಇಟ್ಟುಕೊಂಡಿರಬಹುದೇ ಎಂದು ಪ್ರಶ್ನೆಗಳ ಸುರಿಮಳೆಗೈದಿದೆ.
ಇನ್ನು ಒಂದು ದೇಶದಲ್ಲಿ ಎರಡು ಧ್ವಜ, ಎರಡು ಪ್ರಧಾನಿ ನಡೆಯುವುದಿಲ್ಲ ಎಂಬ ನಮ್ಮ ಹೋರಾಟಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿತ್ತು. ಕಾಶ್ಮೀರದ ಲಾಲ್ ಚೌಕ್, ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ರಾಷ್ಟ್ರ ಧ್ವಜ ಹಾರಿಸಲು ಕಾಂಗ್ರೆಸ್ ಅಡ್ಡಿಪಡಿಸಿತ್ತು. ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ್ದೇ ಕಾಂಗ್ರೆಸ್ ಸಾಧನೆ ಎಂದು ಟೀಕೆ ಮಾಡಿದೆ.








