ಬೆಂಗಳೂರು : ರಾಜ್ಯ ಬಿಜೆಪಿ ಪದಾಧಿಕಾರಿಗಳ ನೇಮಕ ಮಾಡಲಾಗಿದ್ದು, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರಗೆ ಬಿಜೆಪಿ ಉಪಾಧ್ಯಕ್ಷ ಪಟ್ಟ ನೀಡಲಾಗಿದೆ.
ಉಪಾಧ್ಯಕ್ಷರಾಗಿ ವಿಜಯೇಂದ್ರ, ತೇಜಸ್ವಿನಿ ಅನಂತಕುಮಾರ್, ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ, ಅರವಿಂದ ಲಿಂಬಾವಳಿ, ನಿರ್ಮಲಾ ಕುಮಾರ್ ಸುರಾನಾ, ಮಾಲೀಕಯ್ಯ ಗುತ್ತೇದಾರ್ ಅವರನ್ನು ನೇಮಿಸಲಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿ.ವೈ ವಿಜಯೇಂದ್ರ, ಸಾಮಾನ್ಯ ಕಾರ್ಯಕರ್ತನಾಗಿದ್ದ ನನಗೆ ಇದೀಗ ‘ಕರ್ನಾಟಕ ಬಿಜೆಪಿಯ ಉಪಾಧ್ಯಕ್ಷ’ ಸ್ಥಾನದ ಮಹತ್ವದ ಜವಾಬ್ದಾರಿಯನ್ನು ನನ್ನ ಹೆಗಲಿಗೆ ಹೊರಿಸಲಾಗಿದೆ. ಇದಕ್ಕಾಗಿ ಪಕ್ಷದ ವರಿಷ್ಠ ಮಂಡಳಿಗೆ ನಾನೆಂದೂ ಆಭಾರಿ. ಹಿರಿಯರ ಮಾರ್ಗದರ್ಶನ, ಕಾರ್ಯಕರ್ತರ ಸಹಕಾರ, ಜನರ ಆಶೀರ್ವಾದ ಮಾತ್ರ ನನ್ನ ಮುಂದಿನ ಹೆಜ್ಜೆಗಳಿಗೆ ಯಶಸ್ಸಿನ ಮೆಟ್ಟಿಲಾಗಬಲ್ಲದು ಎಂದು ಬರೆದುಕೊಂಡಿದ್ದಾರೆ.
ಸಾಮಾನ್ಯ ಕಾರ್ಯಕರ್ತನಾಗಿದ್ದ ನನ್ನನು ಇದೀಗ”ಕರ್ನಾಟಕ ಬಿಜೆಪಿಯ ಉಪಾಧ್ಯಕ್ಷ”
ಸ್ಥಾನದ ಮಹತ್ವದ ಜವಾಬ್ದಾರಿಯನ್ನು ನನ್ನ ಹೆಗಲಿಗೆ ಹೊರಿಸಲಾಗಿದೆ.ಇದಕ್ಕಾಗಿ ಪಕ್ಷದ ವರಿಷ್ಠ ಮಂಡಳಿಗೆ ನಾನೆಂದೂ ಆಭಾರಿ.ಹಿರಿಯರ ಮಾರ್ಗದರ್ಶನ, ಕಾರ್ಯಕರ್ತರ ಸಹಕಾರ,ಜನರ ಆಶೀರ್ವಾದ ಮಾತ್ರ, ನನ್ನ ಮುಂದಿನ ಹೆಜ್ಜೆಗಳಿಗೆ ಯಶಸ್ಸಿನ ಮೆಟ್ಟಿಲಾಗ ಬಲ್ಲದು.🙏 pic.twitter.com/6ocwuEkZPF— Vijayendra Yeddyurappa (@BYVijayendra) July 31, 2020
ಇನ್ನು ಪ್ರಧಾನ ಕಾರ್ಯದರ್ಶಿಗಳಾಗಿ ರವಿಕುಮಾರ್, ಮಾಜಿ ಎಂಎಲ್ ಸಿ ಅಶ್ವಥ್ ನಾರಾಯಣ, ಸಿದ್ದರಾಜು, ಮಹೇಶ್ ಟೆಂಗಿನ ಕಾಯಿ ಅವರನ್ನು ನೇಮಕ ಮಾಡಲಾಗಿದೆ. ಮಹಿಳಾ ಮೋರ್ಚಾ ಅಧ್ಯಕ್ಷೆಯಾಗಿ ಗೀತಾ ವಿವೇಕಾನಂದ, ಯುವ ಮೋರ್ಚಾದ ಅಧ್ಯಕ್ಷರನ್ನಾಗಿ ಸಂದೀಪ್ ಎಂಬುವರನ್ನ ನೇಮಿಸಲಾಗಿದೆ.