BJP | ಕೆಂಪೇಗೌಡರ ಪ್ರತಿಮೆಯ ವಿಚಾರದಲ್ಲಿ ರಾಜಕೀಯವೇಕೆ
ಬೆಂಗಳೂರು : ಸರ್ಕಾರ ಹಣದಲ್ಲಿ ಕೆಂಪೇಗೌಡ ಪ್ರತಿಮೆ ನಿರ್ಮಿಸಿದ್ದೇ ದೊಡ್ಡ ಅಪರಾಧ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಬಿಜೆಪಿ ಟ್ವಿಟ್ಟರ್ ನಲ್ಲಿ ತಿರುಗೇಟು ನೀಡಿದೆ.
ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಕೆಂಪೇಗೌಡ ಪ್ರತಿಮೆಯನ್ನು ಸರ್ಕಾರದ ಹಣದಲ್ಲಿ ಮಾಡಿದ್ದೇ ದೊಡ್ಡ ಅಪರಾಧ. ಬೆಂಗಳೂರು ಇಂಟರ್ ನ್ಯಾಷನಲ್ ಏರ್ ಪೋರ್ಟ್ ಗೆ ನಾವು ಜಾಗ ಕೊಟ್ಟಿದ್ದೇವೆ.
ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾವು ಜಾಗ ದುಡ್ಡು ಕೊಟ್ಟಿದ್ದೇವೆ.
ಏರ್ ಪೀರ್ ನವರಿಗೆ ಹೇಳಿದ್ದರೆ ಪ್ರತಿಮೆ ನಿರ್ಮಿಸುತ್ತಿದ್ದರು. ಸರ್ಕಾರದ ದುಡ್ಡಿನಲ್ಲಿ ಕಟ್ಟುವಂತಹ ಅಗತ್ಯತೆ ಏನಿತ್ತು ಎಂದು ಪ್ರಶ್ನಿಸಿದ್ದಾರೆ.
ಇದಕ್ಕೆ ಟ್ವಿಟ್ಟರ್ ನಲ್ಲಿ ಬಿಜೆಪಿ ಮಾನ್ಯ ಡಿ.ಕೆ.ಶಿವಕುಮಾರ್ ಅವರೇ, ಸರ್ಕಾರಿ ಹಣದಲ್ಲಿ ಏಸು ಪ್ರತಿಮೆ ನಿರ್ಮಿಸಿದರೆ, ಸರ್ಕಾರಿ ಹಣದಲ್ಲಿ ಟಿಪ್ಪು ಪ್ರತಿಮೆ ನಿರ್ಮಿಸಿದರೆ ನಿಮಗೆ ಸಂತೋಷವಾಗುತಿತ್ತೇ? ನಾಡಪ್ರಭು ಕೆಂಪೇಗೌಡರ ಪ್ರತಿಮೆಯ ವಿಚಾರದಲ್ಲಿ ರಾಜಕೀಯವೇಕೆ ಎಂದು ಪ್ರಶ್ನಿಸಿದೆ.