Annamalai | ಮೈತ್ರಿ ಇಲ್ಲವೇ ಇಲ್ಲ.. ಏಕಾಂಗಿಯಾಗಿ ಫೈಟ್
ತಮಿಳುನಾಡು : ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ. BJP will contest the upcoming urban local body elections in Tamil Nadu alone
ಚುನಾವಣೆಯಲ್ಲಿ ಏಕಾಂಗಿಯಾಗಿಯೇ ಸ್ಪರ್ಧಿಸಲಿದ್ದೇವೆ ಎಂದು ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಘೋಷಣೆ ಮಾಡಿದ್ದಾರೆ.
ಕಳೆದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಎಐಎಸಿಎಂಕೆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣೆಯನ್ನು ಎದುರಿಸಿತ್ತು.
ಆದ್ರೆ ನಿರೀಕ್ಷಿತ ಫಲಿತಾಂಶ ಬರಲಿಲ್ಲ. ಇದೀಗ ಲೋಕಲ್ ಫೈಟ್ ಎದುರಾಗಿದ್ದು, ಈ ಎರಡೂ ಪಕ್ಷಗಳ ನಡುವೆ ಸೀಟು ಹಂಚಿಕೆ ವಿಚಾರದಲ್ಲಿ ಗೊಂದಲ ಉಂಟಾಗಿದೆ.
ಹೀಗಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡಲು ಬಿಜೆಪಿ ನಿರ್ಧರಿಸಿದೆ. ಈ ಬಗ್ಗೆ ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಘೋಷಣೆ ಮಾಡಿದ್ದಾರೆ.
ಬಿಜೆಪಿ ತಮಿಳುನಾಡಿನಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಎಲ್ಲ ನಗರ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಅಖಾಡಕ್ಕಿಳಿಯಲಿದ್ದು, ಶೀಘ್ರದಲ್ಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದರು.









