ಬೆಂಗಳೂರು: ಕೇಂದ್ರ ಸರ್ಕಾರದ ತಾರತಮ್ಯ ನೀತಿ ವಿರೋಧಿಸಿ ಫೆ.6ರಂದು ರಾಜ್ಯ ಕಾಂಗ್ರೆಸ್ ದೆಹಲಿ ಚಲೋ ಮಾಡುತ್ತಿರುವ ಹಿನ್ನೆಲೆಯಲ್ಲಿ ಫೆ.7ರಂದು ವಿಧಾನಸೌಧದಲ್ಲಿ ಬಿಜೆಪಿ (BJP) ಶಾಸಕರು ಪ್ರತಿಭಟನೆಗೆ ಮುಂದಾಗಿದ್ದಾರೆ.
ಈ ಕುರಿತು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಈಗಷ್ಟೇ ಫೆಬ್ರವರಿ 7ರಂದು ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳುತ್ತಿದ್ದಂತೆ ಮಾಜಿ ಸಚಿವ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದು, ಫೆ. 7 ರಂದು ನಮ್ಮ ಶಾಸಕರು ರೈತ ವಿರೋಧಿ ಸರ್ಕಾರದ ವಿರುದ್ಧ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ಮಾಡುತ್ತಾರೆ. ಅಧಿವೇಶನದಲ್ಲಿ ಕೂಡ ಹೋರಾಟ ನಡೆಯಲಿದೆ ಎಂದು ಹೇಳಿದ್ದಾರೆ.