ಬೆಂಗಳೂರು: ಉತ್ತಮ ಸ್ಥಾನದ ಭರವಸೆಯನ್ನು ಹೈಕಮಾಂಡ್ ನೀಡಿದೆ. ಹೀಗಾಗಿ ಹಿರಿಯರ ಮಾತಿಗೆ ಮನ್ನಣೆ ಕೊಟ್ಟು ಮರಳಿ ಪಕ್ಷ ಸೇರಿದ್ದೇನೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಾಲಯಕ್ಕೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 25 ಕ್ಷೇತ್ರಗಳನ್ನು ಗೆದ್ದಿತ್ತು. ಈಗ ಅದಕ್ಕಿಂತ ಹೆಚ್ಚು ಸ್ಥಾನ ಗೆಲ್ಲಲು ಪ್ರಯತ್ನ ಮಾಡಲಾಗುತ್ತದೆ. ಹೀಗಾಗಿ ಇಡೀ ರಾಜ್ಯ ಪ್ರವಾಸ ಮಾಡುತ್ತೇನೆ. ಸಂಘಟನಾತ್ಮಕ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರನ್ನು ಭೇಟಿ ಮಾಡಿದ್ದೇನೆ. ನನ್ನ ಜೊತೆ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಹಲವರು ಇದ್ದರು ಎಂದು ಹೇಳಿದ್ದಾರೆ. ಬಿಜೆಪಿ ಕೇಡರ್ ಆಧರಿತ ಕಾರ್ಯಕರ್ತರನ್ನು ಹೊಂದಿದೆ. ವಿಜಯೇಂದ್ರ ಅಧ್ಯಕ್ಷರಾದ ನಂತರ ಈ ಪ್ರಯತ್ನ ಮಾಡಿದ್ದಾರೆ. ಯಡಿಯೂರಪ್ಪ ಮುತುವರ್ಜಿ ವಹಿಸಿದ್ದಾರೆ. ಹೀಗಾಗಿ ನಾನು ಮರಳಿ ಬಂದಿದ್ದೇನೆ ಎಂದು ಹೇಳಿದ್ದಾರೆ.