ಬೆಂಗಳೂರು: ರಾಜರಾಜೇಶ್ವರಿ ನಗರ ಹಾಗೂ ಶಿರಾ ಅಸೆಂಬ್ಲಿ ಕ್ಷೇತ್ರಗಳ ಉಪಚುನಾವಣೆ ಮತ್ತು ವಿಧಾನಪರಿಷತ್‍ಗೆ ನಡೆಯುವ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವು ನಿಶ್ಚಿತ ಎಂದು ಡಿಸಿಎಂ ಲಕ್ಷ್ಮಣ ಸವದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸವದಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಯಡಿಯೂರಪ್ಪ ಸರ್ಕಾರದ ಅತ್ಯುತ್ತಮ ಕಾರ್ಯವೈಖರಿಯನ್ನು ಮತದಾರರು ಗಮನಿಸಲಿದ್ದಾರೆ. ಎರಡೂ ಬೈ ಎಲೆಕ್ಷನ್ ಕ್ಷೇತ್ರಗಳು, ನಾಲ್ಕು ಪರಿಷತ್ ಸ್ಥಾನಗಳಲ್ಲಿ ಮತದಾರರು ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಲಿದ್ದಾರೆ ಎಂದರು.
ಕೊರೊನಾ ಸಂಕಷ್ಟದಿಂದ ರಾಜ್ಯದಲ್ಲಿ ತೆರಿಗೆ ಸಂಗ್ರಹ ಕುಸಿದಿದ್ದು, ಆದಾಯದ ಪ್ರಮಾಣವೂ ಕಡಿಮೆಯಾಗಿದೆ. ಆದರೂ, ನೆರೆ ಸಂಕಷ್ಟದಲ್ಲಿರುವ ಜನರಿಗೆ ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಕ್ಷಣ ಸ್ಪಂದಿಸುತ್ತಿವೆ. ಪರಿಹಾರ ನೀಡುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತಿವೆ ಎಂದು ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.
ಮಾರುಕಟ್ಟೆಯಲ್ಲಿ ರೈತರ ಉತ್ಪನ್ನಗಳ ಬೆಲೆ ಕುಸಿತ ಸ್ವಾಭಾವಿಕ. ಆದರೆ, ಇದರಿಂದ ರೈತರು ಧೃತಿಗೆಡಬಾರದು. ಅದೇ ಕಾರಣಕ್ಕೆ ರೈತರ ಉತ್ಪನ್ನಗಳ ಬೆಲೆ ಕುಸಿದಾಗ ಕೇಂದ್ರ ಸರ್ಕಾರ ನಿಗಧಿಪಡಿಸಿದ ಬೆಂಬಲ ಬೆಲೆ ನೀಡಿ ಉತ್ಪಾದನೆಗಳನ್ನು ಖರೀದಿಸಲಾಗುತ್ತಿದೆ. ಇದರಿಂದ ಮಾರುಕಟ್ಟೆಯಲ್ಲಿ ದರ ಹೆಚ್ಚಳ ಸಾಧ್ಯವಿದೆ. ಈ ಮೂಲಕ ರೈತಪರ ಸರ್ಕಾರ ನಮ್ಮದೆಂದು ಸಾಬೀತಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಂಸದ ಜಿ.ಎಸ್ ಬಸವರಾಜು, ಮಾಜಿ ಸಚಿವ ಸಿ.ಹೆಚ್ ವಿಜಯಶಂಕರ್, ಸೊಗಡು ಶಿವಣ್ಣ, ಶಾಸಕರಾದ ಜ್ಯೋತಿ ಗಣೇಶ್, ಮಸಾಲೆ ಜಯರಾಮ್, ಉಪಸ್ಥಿತರಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel