ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ( BJP ) 200ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲ್ಲಲಿದೆ : ಅಮಿತ್ ಶಾ ವಿಶ್ವಾಸ
ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 26 ಮತ್ತು ಅಸ್ಸಾಂನಲ್ಲಿ 37 ಸ್ಥಾನಗಳಲ್ಲಿ ಬಿಜೆಪಿ ಜಯಗಳಿಸಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಹೇಳಿದ್ದಾರೆ.
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮಾತನಾಡಿರೋ ಅಮಿತ್ ಸಾ ಅವರು ಪಶ್ಚಿಮ ಬಂಗಾಳದ 294 ಸ್ಥಾನಗಳ ಪೈಕಿ 200ಕ್ಕೂ ಅಧಿಕ ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದಲ್ಲಿ ಶೇ 84 ಮತ್ತು ಅಸ್ಸಾಂನಲ್ಲಿ ಶೇ 79 ಮತದಾನವಾಗಿದೆ.
ಪಶ್ಚಿಮ ಬಂಗಾಳದಲ್ಲಿ 5 ಜಿಲ್ಲೆಗಳಲ್ಲಿ 30 ಸ್ಥಾನಗಳಿಗೆ ಮತ್ತು ಅಸ್ಸಾಂನಲ್ಲಿ 12 ಜಿಲ್ಲೆಗಳ 47 ಸ್ಥಾನಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆದಿದೆ.









