ದೇಶದಲ್ಲಿ ನಾಲ್ಕು ರಾಜ್ಯಗಳ ಫಲಿತಾಂಶ ಇಂದು ಹೊರ ಬಿದ್ದಿದ್ದು, ಮೂರು ರಾಜ್ಯಗಳನ್ನು ಬಿಜೆಪಿ ಗೆದ್ದಿದೆ. ಛತ್ತೀಸ್ಗಢ, ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಸಚಿವೆ ಸ್ಮೃತಿ ಇರಾನಿ(Smriti Irani) ‘ಮೋದಿ ಮ್ಯಾಜಿಕ್’ ಎಂದು ಹೇಳಿದ್ದಾರೆ.
ಸದ್ಯದ ಮಾಹಿತಿಯಂತೆ ರಾಜಸ್ಥಾನ ಹಾಗೂ ಛತ್ತೀಸ್‌ಗಢದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮಧ್ಯಪ್ರದೇಶದಲ್ಲಿ ಈಗಾಗಲೇ ಬಹುತೇಕ ಗೆಲುವು ಸಾಧಿಸಿದೆ. ರಾಜಸ್ಥಾನದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗಳು 114 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್ 68 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.
ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಮತ ಎಣಿಕೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ಪ್ರಚಾರಕ್ಕೆ ಮನ್ನಣೆ ನೀಡಿದ್ದಾರೆ. ಜನರು ಅವರ ಮೇಲೆ ಅಪಾರ ನಂಬಿಕೆ ಹೊಂದಿದ್ದಾರೆ ಎಂದು ಹೇಳಿದ್ದಾರೆ.