Gurugram: ಹರಿಯಾಣದಲ್ಲಿ ಬಿಜೆಪಿ ಕಾರ್ಯಕರ್ತನ ಬರ್ಬರ ಹತ್ಯೆ…
ಗುರುವಾರ ಹರಿಯಾಣದ ಗುರುಗ್ರಾಮ್ನಲ್ಲಿ ಬಿಜೆಪಿ ಕಾರ್ಯಕರ್ತ ಸುಖಬೀರ್ ಖತಾನಾ ಅವರನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸದರ್ ಬಜಾರ್ ಬಳಿ ನಾಲ್ಕೈದು ಅಪರಿಚಿತ ವ್ಯಕ್ತಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಅವರು ಪ್ರಾಣ ಕಳೆದುಕೊಂಡಿದ್ದಾರೆ.
ಹರಿಯಾಣ ಪೊಲೀಸರ ಪ್ರಕಾರ, ಸದರ್ ಬಜಾರ್ ಬಳಿಯ ಗುರುದ್ವಾರ ರಸ್ತೆಯಲ್ಲಿರುವ ಶೋರೂಮ್ನಲ್ಲಿದ್ದ ಬಿಜೆಪಿ ಕಾರ್ಯಕರ್ತ ಸುಖ್ಬೀರ್ ಖತಾನಾ ಮೇಲೆ ಸುಮಾರು ಐದು ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದಾರೆ.
ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಯಾವುದೇ ಪ್ರಯೋಜನವಾಗಿಲ್ಲ. ಅವರು ನಿಧನರಾಗಿದ್ದಾರೆ. ಪ್ರಕರಣದ ತನಿಖೆಯ ಭಾಗವಾಗಿ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.
BJP worker Sukhbir Khatana was brutally murdered in Gurugram, Haryana on Thursday.








