ADVERTISEMENT
Thursday, June 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

BJP ಕಾರ್ಯಕರ್ತರೇ.., ನೀವು ಸ್ವಾರ್ಥಿ ನಾಯಕರ ಗುಲಾಮರಲ್ಲ

Mahesh M Dhandu by Mahesh M Dhandu
July 30, 2022
in Newsbeat, State, ಬೆಂಗಳೂರು
JDS slams karnataka bjp

JDS slams karnataka bjp

Share on FacebookShare on TwitterShare on WhatsappShare on Telegram

BJP ಕಾರ್ಯಕರ್ತರೇ.., ನೀವು ಸ್ವಾರ್ಥಿ ನಾಯಕರ ಗುಲಾಮರಲ್ಲ

ಬೆಂಗಳೂರು : ಬಿಜೆಪಿ ಕಾರ್ಯಕರ್ತರೇ.., ನೀವು ಸ್ವಾರ್ಥಿ ನಾಯಕರ ಗುಲಾಮರಲ್ಲ, ಇನ್ನಾದರೂ ಕೊಲೆಗೆಡುಕ ರಾಜಕೀಯ ಕರಾಳ ಮುಖವನ್ನು ಅರ್ಥ ಮಾಡಿಕೊಳ್ಳಿ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ.

Related posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

June 18, 2026
10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

June 18, 2026

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆಯನ್ನು ಖಂಡಿಸಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸರಣಿ ಟ್ವೀಟ್ ಗಳನ್ನು ಮಾಡಿದ್ದಾರೆ.

ಕಾರ್ಯಕರ್ತರನ್ನು ‘ಮತೀಯ ವ್ಯಸನಿ’ಗಳನ್ನಾಗಿ ಮಾಡಿ ಬೇಳೆ ಬೇಯಿಸಿಕೊಳ್ಳುವ ಬಿಜೆಪಿ ಅಸಲಿ ಮುಖವನ್ನು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಳಚಿಟ್ಟಿದ್ದಾರೆ. ಇದು ಅತ್ಯಂತ ಹೇಯ ಮತ್ತು ಪಾತಕ, ರಾಕ್ಷಸೀ ರಾಜಕಾರಣದ ಪರಾಕಾಷ್ಠೆ.

ಕಂಡೋರ ಮಕ್ಕಳ ಕಗ್ಗೊಲೆ, ಬಡ ಯುವಕರ ನೆತ್ತರಿನ ಮೇಲೆ ಸುಖದಸೌಧ ಕಟ್ಟುತ್ತಿರುವ ಬಿಜೆಪಿಗೆ ಪಾಪಪ್ರಜ್ಞೆ ಇಲ್ಲ. ಸಹಪಾಠಿಯ ಕೊಲೆಗೆ ಪ್ರತಿಯಾಗಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರೆ, ಅವರ ಆತ್ಮಸ್ಥೈರ್ಯವನ್ನೇ ಅಣಕಿಸುವ, ಅವರ ನೈತಿಕತೆಯನ್ನೇ ಶಂಕಿಸುವ ಈಶ್ವರಪ್ಪನವರು ಬಿಜೆಪಿಯ ನೈಜ ಮುಖವಾಡ.

ಬಾವುಟ ಕಟ್ಟಲು, ಕರಪತ್ರ ಹಂಚಲು, ಮತ ಕೇಳಲು, ಟೆಂಟ್‌ ಹಾಕಲು, ಗೆದ್ದವರನ್ನು ಭುಜದ ಮೇಲೆ ಹೊತ್ತು ಮೆರವಣಿಗೆ ಮಾಡಲು ಇದೇ ಯುವಕರು ಬೇಕು. ಇಂಥ ಯುವಕರಿಗೆ ನಾಯಕರಾದವರೇ ಧರ್ಮದ ಅಪೀಮಿನ ಅಮಲೇರಿಸಿ, ಅವರ ಜೀವಕ್ಕೆ ಸಂಚಕಾರ ತಂದು, ಅವರ ಕುಟುಂಬಗಳನ್ನು ಬೀದಿಪಾಲು ಮಾಡುವ ಕಿರಾತಕ, ಕೊಲೆಗೆಡುಕ ರಾಜಕಾರಣಕ್ಕೆ ಈಶ್ವರಪ್ಪನವರೇ ಪರಾಕಾಷ್ಠೆ ಎಂದು ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.

BJP workers you are not slaves of selfish leaders HDK tweets  saaksha tv
BJP workers you are not slaves of selfish leaders HDK tweets saaksha tv

“ರಾಜೀನಾಮೆ ಒಪ್ಪಿದರೆ ನಿಮ್ಮ ಗತಿ ಏನು? ನಿಮ್ಮ ಜಾಗಕ್ಕೆ ಹೊಸಬರು ಬರುತ್ತಾರೆ! ಬಿಜೆಪಿಗೆ ಕಾರ್ಯಕರ್ತರು ಸಿಗುವುದಿಲ್ಲವೇ? ಯುವಮೋರ್ಚಾ ಕಾರ್ಯಕರ್ತರು ಈಗಷ್ಟೇ ಕಣ್ಣು ಬಿಡುತ್ತಿದ್ದಾರೆ. ಪಕ್ಷಕ್ಕೆ ಅವರ ಕೊಡುಗೆ ಏನು?” ಎಂದು ಪ್ರಶ್ನಿಸಿರುವ ಈಶ್ವರಪ್ಪ, ಸಭ್ಯ ರಾಜಕಾರಣದ ಎಲ್ಲೆ ಮೀರಿ ಅಹಂಕಾರ ಪ್ರದರ್ಶಿಸಿದ್ದಾರೆ.

ಬಿಜೆಪಿ ಎತ್ತ ಸಾಗುತ್ತಿದೆ ಎನ್ನುವುದಕ್ಕೆ ಈಶ್ವರಪ್ಪ ಹೇಳಿಕೆಯೇ ಸಾಕ್ಷಿ. ನೆತ್ತರಿನ ಸುಪ್ಪತ್ತಿಗೆಯ ಮೇಲೆ ಮೆರೆಯುತ್ತಿರುವ ಈಶ್ವರಪ್ಪ, ಶಿವಮೊಗ್ಗದಲ್ಲಿ ಹತ್ಯೆಗೀಡಾದ ಹರ್ಷನ ಕೊಲೆ ಸಂದರ್ಭದಲ್ಲಿ ವರ್ತಿಸಿದ ರೀತಿ ಎಲ್ಲರೂ ಬಲ್ಲರು. ಇವರು ಬಿಜೆಪಿಯ ರಕ್ಕಸ ಮುಖವನ್ನು ಅನಾವರಣ ಮಾಡಿದ್ದಾರೆ.

ಕಗ್ಗೊಲೆಯಾದ ಬಡ ಯುವಕರ ಆತ್ಮಘೋಷದ ಶಾಪ ಬಿಜೆಪಿಗೆ ತಟ್ಟದೆ ಇರದು. ಕರ್ನಾಟಕವನ್ನು ʼಕಗ್ಗೊಲೆಗಳ ಕರ್ನಾಟಕʼವನ್ನಾಗಿ ಮಾಡಿದ ಕುಖ್ಯಾತಿ ಈ ಪಕ್ಷದ್ದೇ. ಕಮಲದ ರೆಕ್ಕೆಗಳಿಗೆ ಅಂಟಿಕೊಂಡಿರುವ ರಕ್ತದ ಕಲೆಗಳು, ನಿಮ್ಮ ಪಾಪದ ಕೊಡವನ್ನು ತುಂಬಿಸುತ್ತಿವೆ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

Tags: #Saaksha TVBJPCongressH D KUMARASWAMY
ShareTweetSendShare
Join us on:

Related Posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

by admin
June 18, 2026
0

ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಏಳು ಸ್ಥಾನಗಳಿಗೆ ಎಂಟು ಅಭ್ಯರ್ಥಿಗಳು ಕಣಕ್ಕಿಳಿದಿರುವುದರಿಂದ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ. ಕಾಂಗ್ರೆಸ್ ಐದು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ-ಜೆಡಿಎಸ್ ಮೈತ್ರಿ ಮೂರು...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

by Shwetha
June 18, 2026
0

ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಇನ್ನು ಮುಂದೆ ಸಮಯ ಪಾಲನೆ ಮತ್ತು ಶಿಸ್ತಿನ ಪರ್ವ ಆರಂಭವಾಗಲಿದೆ. ನೌಕರರು ಕಚೇರಿಗೆ ಬಾರದೆ ಅಥವಾ ತಡವಾಗಿ ಬಂದು ಹಾಜರಾತಿ ದಾಖಲಿಸುವ ಹಳೆಯ...

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

by Shwetha
June 18, 2026
0

ದೇಶದ ಐದು ಪ್ರಮುಖ ರಾಜ್ಯಗಳಾದ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ರಾಜ್ಯಗಳ ವಿಧಾನಸಭಾ ಚುನಾವಣೆಗಳು ಅವಧಿಗೆ ಮುನ್ನ ನಡೆಯಲಿವೆ ಎಂಬ ಊಹಾಪೋಹಗಳಿಗೆ ಕೇಂದ್ರ...

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

by Shwetha
June 18, 2026
0

ಜಾಗತಿಕ ಆಹಾರ ಉದ್ಯಮದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಯಮ್.ಕಾಮ್ ತನ್ನ ಅಧೀನದಲ್ಲಿರುವ ಪ್ರಸಿದ್ಧ ಪಿಜ್ಜಾ ಹಟ್ ವ್ಯವಹಾರದ ಕೆಲವು ಭಾಗಗಳನ್ನು ಎರಡು ಪ್ರತ್ಯೇಕ ಒಪ್ಪಂದಗಳ ಮೂಲಕ ಒಟ್ಟು...

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

by Shwetha
June 18, 2026
0

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆಯ ಹೆಸರಿನಲ್ಲಿ ಸಾವಿರಾರು ಎಕರೆ ಫಲವತ್ತಾದ ಭೂಮಿ ಮತ್ತು ಲಕ್ಷಾಂತರ ಮರಗಳನ್ನು ನಾಶಪಡಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ಪ್ರತಿಪಕ್ಷ ನಾಯಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram