ಬಿಜೆಪಿಯಲ್ಲಿ ಯಡಿಯೂರಪ್ಪ ಇಲ್ಲಂದ್ರೆ ಬಿಜೆಪಿ ಇಲ್ಲ : ಅಮರೇಗೌಡ ಪಾಟೀಲ್
ಕೊಪ್ಪಳ : ಬಿಜೆಪಿ ಯಡಿಯೂರಪ್ಪ ಅವರನ್ನು ಬದಲಾಯಿಸುವುದು ಕಷ್ಟ ಬಿಜೆಪಿಯಲ್ಲಿ ಯಡಿಯೂರಪ್ಪ ಇಲ್ಲಂದ್ರೆ ಬಿಜೆಪಿ ಇಲ್ಲ ಎಂದು ಕುಷ್ಟಗಿ ಕ್ಷೇತ್ರದ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ ಹೇಳಿದ್ದಾರೆ.
ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಬಿಜೆಪಿ ಯಡಿಯೂರಪ್ಪ ಅವರನ್ನು ಬದಲಾಯಿಸುವುದು ಕಷ್ಟ ಬಿಜೆಪಿಯಲ್ಲಿ ಯಡಿಯೂರಪ್ಪ ಇಲ್ಲಂದ್ರೆ ಬಿಜೆಪಿ ಇಲ್ಲ ಎಂದರು.
ಇದೇ ವೇಳೆ ರಮೇಶ್ ಜಾರಕಿಹೊಳಿ ರಾಜೀನಾಮೆ ಹೇಳಿಕೆ ಬಗ್ಗೆ ಮಾತನಾಡಿ, ರಮೇಶ್ ಜಾರಕಿಹೊಳಿ ಬಿಜೆಪಿ ಬಿಟ್ಟು ಬೇರೆ ಪಕ್ಷ ಸೇರಬಹುದು.
ಅವರಿಗೆ ಬಿಜೆಪಿಯ ಗರ್ಭಗುಡಿ ಸಂಸ್ಕøತಿ ಒಗ್ಗುತ್ತಿಲ್ಲ ಎನ್ನುವುದು ಅವರ ನಡುವಳಿಕೆಯಿಂದ ತಿಳಿಯುತ್ತಿದೆ. ಜಾರಕಿಹೊಳಿ ಇತ್ತೀಚೆಗೆ ಕೆಲವರೊಂದಿಗೆ ಮುಂಬೈಗೆ ಹೋಗಿರುವುದನ್ನು ನೋಡಿದರೆ ಅವರು ಬಿಜೆಪಿ ತೊರೆಯುವ ಸಾಧ್ಯತೆ ಇದೆ.
ಅವರೊಂದಿಗೆ ಕೆಲವರು ಕಾಂಗ್ರೆಸ್ ಅಥವಾ ಜೆಡಿಎಸ್ ಗೆ ಮತ್ತೆ ಸೇರುವ ಸಾಧ್ಯತೆ ಇದೆ. ಒಂದು ವೇಳೆ ಅವರು ವಾಪಸ್ ಬಂದರೆ ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಅಭಿಪ್ರಾಯಪಟ್ಟರು.
ಇನ್ನು ಕಾಂಗ್ರೆಸ್ ಸಿಎಂ ಅಭ್ಯರ್ಥಿ ಬಗ್ಗೆ ಮಾತನಾಡಿ, ಕಾಂಗ್ರೆಸ್ ಸಿಎಂ ಸ್ಥಾನದ ಬಗ್ಗೆ ಈಗ ಚರ್ಚಿಸಿದರೆ ಬಿಜೆಪಿಗೆ ಅನುಕೂಲವಾಗಲಿದೆ.
ನಾವೇ ಅವರಿಗೆ ಆಹಾರವಾಗುವುದು ಬೇಡ, ಕಾಂಗ್ರೆಸ್ 7-8 ಜನ ಸಿಎಂ ಸ್ಥಾನದ ಅರ್ಹತೆ ಹೊಂದಿದವರು ಇದ್ದಾರೆ. ಚುನಾವಣೆಯ ನಂತರ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.