ಪಕ್ಷ ಕಟ್ಟಿದವರನ್ನ ಮುಗಿಸುವುದು ಬಿಜೆಪಿಯ ಹೊಸ ಟ್ರೆಂಡ್ : ಕಾಂಗ್ರೆಸ್ Congress saaksha tv
ಬೆಂಗಳೂರು : ಬಿ.ಎಸ್.ಯಡಿಯೂರಪ್ಪ ಅವರನ್ನು ಬಿಜೆಪಿ ಸದಾ ಮಲತಾಯಿ ಮಗನಂತೆ ನಡೆಸಿಕೊಂಡಿದೆ. ಪಕ್ಷ ಕಟ್ಟಿದವರನ್ನ ಮುಗಿಸುವುದು ಬಿಜೆಪಿಯ ಹೊಸ ಟ್ರೆಂಡ್ ಎಂದು ರಾಜ್ಯ ಕಾಂಗ್ರೆಸ್ ಕುಟುಕಿದೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿ.ಎಸ್.ಯಡಿಯೂರಪ್ಪ ಅವರನ್ನು ಬಿಜೆಪಿ ಸದಾ ಮಲತಾಯಿ ಮಗನಂತೆ ನಡೆಸಿಕೊಂಡಿದೆ. ಅಧಿಕಾರದಲ್ಲಿದ್ದಾಗಲೂ ಬಿಜೆಪಿ ಕಾಡಿತ್ತು, ಅಧಿಕಾರ ಕಳೆದುಕೊಂಡ ಮೇಲೂ ಕಾಡುತ್ತಿದೆ. ಮುಂದಿನ ಚುನಾವಣೆಯೊಳಗೆ ಬಿ.ಎಸ್.ಯಡಿಯೂರಪ್ಪ ಅವರನ್ನ ಸಂಪೂರ್ಣ ಮುಗಿಸುವ “ಟಾರ್ಗೆಟ್ BSY” ಯೋಜನೆಯನ್ನು ಬಿಜೆಪಿ ಹಮ್ಮಿಕೊಂಡಿದೆ. ಪಕ್ಷ ಕಟ್ಟಿದವರನ್ನ ಮುಗಿಸುವುದು ಬಿಜೆಪಿಯ ಹೊಸ ಟ್ರೆಂಡ್!
ನೀರಾವರಿ ಇಲಾಖೆಯ 20,000 ಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಬಿ.ವೈ.ವಿಜಯೇಂದ್ರ ಹಾಗೂ ಬಿ.ಎಸ್.ಯಡಿಯೂರಪ್ಪ ಅವರ ಆಪ್ತರನ್ನೇ ಗುರಿಯಾಗಿಸಿ ಐಟಿ ದಾಳಿಯಾಗಿದೆ. ಸರ್ಕಾರದ ಭ್ರಷ್ಟಾಚಾರವನ್ನ, ವಿಜಯೇಂದ್ರ ಹಸ್ತಕ್ಷೇಪವನ್ನು ಬಿಜೆಪಿ ಒಪ್ಪಿಕೊಳ್ಳುತ್ತದೆಯೇ, ಅಥವಾ ಬಿಎಸ್ ವೈ ಅವರನ್ನು ಮುಗಿಸುವ ತಂತ್ರವೆನ್ನುತ್ತದೆಯೇ. ಬಿ.ಎಸ್.ಯಡಿಯೂರಪ್ಪ ಉತ್ತರಿಸಬೇಕು ಎಂದು ಕಾಲೆಳೆದಿದೆ.