ಪಕ್ಷವನ್ನ ಗೆಲ್ಲಿಸಿ ಸೋತ ಮಮತಾ ಬ್ಯಾನರ್ಜಿ..!
ಕೋಲ್ಕತ್ತಾ : ಪಶ್ವಿಮ ಬಂಗಾಳದಲ್ಲಿ ಟಿಎಂಸಿಗೆ ಜನರು ಜೈ ಹೋ ಎಂದಿದ್ದಾರೆ. ಬರೋಬ್ಬರಿ 200 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಟಿಎಂಸಿ ಸದ್ಯ ಮುನ್ನಡೆಯಲ್ಲಿದ್ದು, ಬಹುತೇಕ ಮತ್ತೆ ಅಧಿಕಾರ ಹಿಡಿಯುವುದು ನಿಶ್ಚಿತವಾಗಿದೆ.
ಆದ್ರೆ ವ್ಹೀಲ್ ಚೇರ್ ನಲ್ಲಿ ಕೂತು ಪಕ್ಷವನ್ನ ಗೆಲ್ಲಿಸಿರುವ ಮಮತಾ ಬ್ಯಾನರ್ಜಿ ನಂದಿಗ್ರಾಮದಲ್ಲಿ ಸೋಲುಂಡಿದ್ದಾರೆ.
ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಸುವೇಂದು ಅಧಿಕಾರಿ 1,662 ಮತಗಳ ಅಂತರದಿಂದ ಗೆದ್ದಿದ್ದಾರೆ.
ಟಿಎಂಸಿಯಿಂದ ಹೊರ ಬಂದು ಬಿಜೆಪಿ ಸೇರಿದ್ದ ಸುವೇಂದು ಅಧಿಕಾರಿ ಮತ್ತು ಮಮತಾ ಬ್ಯಾನರ್ಜಿ ಮಧ್ಯೆ ಭಾರೀ ಸ್ಪರ್ಧೆ ನಡೆದಿತ್ತು. ಮತ ಎಣಿಕೆಯ ಆರಂಭದಿಂದ ಕೊನೆಯವರೆಗೂ ಈ ಕ್ಷೇತ್ರ ಬಾರಿ ಕುತೂಹಲ ಮೂಡಿಸಿತ್ತು.
ಒಮ್ಮೆ ಮಮತಾ ಮುನ್ನಡೆ ಪಡೆದರೆ ಮತ್ತೊಂದು ಸುತ್ತಿನಲ್ಲಿ ಸುವೇಂದು ಅಧಿಕಾರಿ ಮುನ್ನಡೆ ಪಡೆಯುತ್ತಿದ್ದರು. ಕೊನೆ ಹಂತದಲ್ಲಿ ಮಮತಾ ಬ್ಯಾನರ್ಜಿ ಸೋಲುಂಡಿದ್ದಾರೆ.










