ಬೆಳಗಾವಿಯಲ್ಲಿ ಬಿಜೆಪಿಗೆ ಜಯ : ಬಿಎಸ್ ವೈ ಪ್ರತಿಕ್ರಿಯೆ Belgaum saaksha tv
ಬೆಂಗಳೂರು : ಮೂರು ಮಹಾನಗರ ಪಾಲಿಕೆಗಳ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಚುನಾವಣೆಯ ಫಲಿತಾಂಶವು ತೃಪ್ತಿದಾಯಕವಾಗಿದೆ ಎಂದು ಹೇಳಿದ್ದಾರೆ.
ಪಾಲಿಕೆ ಚುನಾವಣೆಯ ಫಲಿತಾಂಶದ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಬಿ.ಎಸ್.ಯಡಿಯೂರಪ್ಪ, ಮೊದಲ ಬಾರಿಗೆ ಬೆಳಗಾವಿಯಲ್ಲಿ ಸ್ಪಷ್ಟ ಬಹುಮತದಿಂದ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಇದೊಂದು ಐತಿಹಾಸಿಕ ಗೆಲುವು ಎಂದು ಬಣ್ಣಿಸಿದರು.
ಇನ್ನು ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಸಂಸದರು, ಶಾಸಕರ ಹಾಗೂ ವಿಧಾನಪರಿಷತ್ ಸದಸ್ಯರ ಬೆಂಬಲದೊಂದಿಗೆ ಬಿಜೆಪಿ ಪುನಃ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರಲಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಜನಪರ ಯೋಜನೆಗಳು, ಸಾಧನೆಗಳು ಚುನಾವಣೆ ಮೇಲೆ ಪ್ರಭಾವ ಬೀರಿದೆ ಎನ್ನುವುದಕ್ಕೆ ಈ ಫಲಿತಾಂಶ ನಿದರ್ಶನ ಎಂದು ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.