ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ : ಬಿ.ಕೆ.ಹರಿಪ್ರಸಾದ್ ಆಗ್ರಹ
ಮಂಗಳೂರು : ರಾಜ್ಯದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ರಾಜ್ಯದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ.
ಈ ಮಧ್ಯೆ ವಿಧಾಸ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರು ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಿ ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಮರಾಠ ಅಭಿವೃದ್ಧಿ ಪ್ರಾಧಿಕಾರ ವಿಚಾರವಾಗಿ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳು ಡಿಸೆಂಬರ್ 05 ರಂದು ಕರ್ನಾಟಕ ಬಂದ್ ಗೆ ಕರೆ ಕೊಟ್ಟಿವೆ.
ಇದಕ್ಕೆ 900 ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ. ಇತ್ತ ಸರ್ಕಾರ ಮಾತ್ರ ಯಾವುದೇ ಕಾರಣಕ್ಕೂ ಬಂದ್ ಮಾಡದಂತೆ ಎಚ್ಚರಿಕೆ ನೀಡುತ್ತಿದೆ.
ಈ ಬಗ್ಗೆ ಇಂದು ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್, ರಾಜ್ಯ ಸರ್ಕಾರವು ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸಿದೆ.
ಆದರೆ, ಕನ್ನಡದ ಅಭಿವೃದ್ಧಿಗೆ ನಿಜವಾದ ಕೊಡುಗೆ ನೀಡಿದವರು ತುಳುವರು. ಅವರನ್ನು ಸರ್ಕಾರ ಕಡೆಗಣಿಸಿದೆ ಎಂದು ಆರೋಪಿಸಿದರು. ವೀರಶೈವ ಲಿಂಗಾಯತರಿಗೆ ಒಬಿಸಿ ಮೀಸಲಾತಿ; ಮುಂದಿನ ಕ್ಯಾಬಿನೆಟ್‍ಗೆ ಬಿಎಸ್‍ವೈ ಮುಂದೂಡಿದ್ದೇಕೆ..?
ಇನ್ನು ತುಳು, ಕೊಡವ ಇತ್ಯಾದಿ ಕರ್ನಾಟಕ ಅಂತರ್ಗತವಾದ ಸ್ಥಳೀಯ ಪ್ರಾದೇಶಿಕ ಭಾಷೆಗಳು ಕನ್ನಡ, ಕರ್ನಾಟಕದ ಅಭಿವೃದ್ಧಿಗೆ ಶತ ಶತಮಾನಗಳಿಂದ ಕೊಡುಗೆ ನೀಡಿವೆ. ರಾಜ್ಯದ 31 ನೇ ಜಿಲ್ಲೆಯಾಗಿ ವಿಜಯನಗರ ಉದಯ : ಆರು ತಾಲೂಕು ಸೇರ್ಪಡೆ
ಹೀಗಾಗಿ ತುಳು, ಕೊಡವ ಇತ್ಯಾದಿ ಕರ್ನಾಟಕ ಅಂತರ್ಗತವಾದ ಸ್ಥಳೀಯ ಪ್ರಾದೇಶಿಕ ಭಾಷೆಗಳ ಅಭಿವೃದ್ಧಿ ಪ್ರಾಧಿಕಾರ ರಚಿಸಬೇಕು ಎಂದು ಒತ್ತಾಯಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










