ಬೆಂಗಳೂರು: ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಾಕಾರಿ ಪೋಸ್ಟ್ ವೊಂದು ವೈರಲ್ ಆಗಿತ್ತು. ನಾವು ಹಿಂದುತ್ವದಲ್ಲಿ ಮುಂದುವರಿಯುತ್ತೇವೆ, ನಮಗೆ ಲಿಂಗಾಯತರ ಅಗತ್ಯವಿಲ್ಲ – ಬಿಎಲ್ ಸಂತೋಷ್” (BL Santhosh) ಎಂದು ಪೋಸ್ಟ್ ಮಾಡಿ ವೈರಲ್ (Viral Post) ಮಾಡಿದ್ದಾರೆ ಎನ್ನಲಾದವರ ವಿರುದ್ಧ ಬೆಂಗಳೂರಿನ ಉತ್ತರ ವಿಭಾಗ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ರೋಪಿಗಳಾದ ಬೈರಪ್ಪ ಹರೀಶ್ ಕುಮಾರ್, ಹೇಮಂತ್ ಕುಮಾರ್, ದಿನೇಶ್ ಅಮಿನ್ ಮಟ್ಟು, ಬಿಂದು ಗೌಡ, ದಿಲೀಪ್ ಗೌಡ ವಿರುದ್ಧ ಬಿಜೆಪಿ ಕಾನೂನು ಘಟಕದ ಯಶವಂತ ದೂರು ದಾಖಲಿಸಿದ್ದಾರೆ. ಈ ಕುರಿತು ಸ್ಪಷ್ಟನೆ ನೀಡಿದ ಸಂತೋಷ್,. ಫೋಟೋಶಾಪ್ನಲ್ಲಿ ತಿರುಚಲಾದ ವರದಿ ಇದು. ಕಾಂಗ್ರೆಸ್ಗೆ ಚರ್ಚಿಸಲು ಯಾವುದೇ ವಿಚಾರಗಳಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಸುನಾಮಿಯಿಂದ ದಿಕ್ಕೆಟ್ಟ ಕಾಂಗ್ರೆಸ್ ನಾಯಕರಲ್ಲಿ ವಿಚಾರಗಳಿಗೂ ಕೊರತೆಯಿದೆ. ಕಾಂಗ್ರೆಸ್ ನ ನಾಯಕರು ಮತ್ತು ಉಸ್ತುವಾರಿಗಳು ಫೋಟೋ ಶಾಪ್ ಕೂಲಿಗಳಾಗಿ ಹೋಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಖಾಸಗಿ ಹೋಟೆಲೊಂದರಲ್ಲಿ ನಡೆದ ರಾಜ್ಯ, ಹೋಬಳಿ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಬಿಎಲ್ ಸಂತೋಷ್ ಹೇಳಿಕೆ ಎಂದು ಹೇಳಲಾಗಿರುವ ಪತ್ರಿಕಾ ವರದಿ ವೈರಲ್ ಆಗಿತ್ತು. ಬಿಜೆಪಿ ನಂಬಿಕೆ ಇಟ್ಟಿರುವುದು ಹಿಂದುತ್ವದ ಆಧಾರದ ಮೇಲೆ ಹೊರತು ಯಾವುದೊ ನಾಯಕನ ಜಾತಿಯ ಮೇಲಲ್ಲ. ಕಾರ್ಯಕರ್ತರು ಹಿಂದುತ್ವದ ಮೇಲೆ ನಂಬಿಕೆ ಇಡಬೇಕೇ ಹೊರತು ಯಾವುದೋ ವ್ಯಕ್ತಿಯ ಮೇಲಲ್ಲ” ಎಂದು ಹೇಳಿದ್ದಾಗಿ ಅದರಲ್ಲಿದೆ.








