ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡಿಸಿದ 130ನೇ ಸಂವಿಧಾನ ತಿದ್ದುಪಡಿ ಮಸೂದೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
X ನಲ್ಲಿ ಪ್ರತಿಕ್ರಿಯಿಸಿದ ಅವರು, BLACK DAY / BLACK BILL ಎಂದು ಬರೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಮಸೂದೆಯನ್ನು ಯಾವುದೇ ಬೆಲೆ ತೆತ್ತಾದರೂ ತಡೆಯಬೇಕೆಂದು ಮಮತಾ ಕರೆ ನೀಡಿದ್ದಾರೆ.
ಅವರ ಪ್ರಕಾರ, ಈ ಮಸೂದೆ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ. ಜನರ ಹಕ್ಕು, ಹಿತಾಸಕ್ತಿಗಳನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಹೀಗಾಗಿ ಪ್ರಜಾಪ್ರಭುತ್ವವನ್ನು ಉಳಿಸಲು ಎಲ್ಲರೂ ಏಕತೆಯಿಂದ ಹೋರಾಡಬೇಕು, ಎಂದು ಆಗ್ರಹಿಸಿದ್ದಾರೆ.
ಮಮತಾ ಬ್ಯಾನರ್ಜಿ ಅವರ ಈ ಪ್ರತಿಕ್ರಿಯೆಯಿಂದ ಮಸೂದೆ ಕುರಿತ ರಾಷ್ಟ್ರ ರಾಜಕೀಯದಲ್ಲಿ ಹೊಸ ಚರ್ಚೆ ಆರಂಭವಾಗಿದೆ.








