ಬ್ಲಾಕ್ ಫಂಗಸ್ – ರಾಜ್ಯದಲ್ಲಿ ಒಟ್ಟು 2, 856 ಮಂದಿಯಲ್ಲಿ ಕಾಣಿಸಿಕೊಂಡ ಹೆಮ್ಮಾರಿ , 225 ಜನ ಬಲಿ
ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ.. ಮತ್ತೊಂದೆಡೆ ಲಾಕ್ ಡೌನ್ ನಿಂದಾಗಿ ಬಡವರು , ಸಿನಿಮಾ ಕಾರ್ಮಿಕರ ಬದುಕು ಸಂಕಷ್ಟಕ್ಕೆ ಸಿಲುಕಿದೆ.. ಅನೇಕರು ಒಂದು ಹೊತ್ತಿನ ಊಟಕ್ಕೆ ಕಷ್ಟ ಪಡುವ ಪರಿಸ್ಥಿತಿ ಎದುರಾಗಿದೆ..
ಕೋವಿಡ್ ಅಲೆಯ ನಡುವೆ ದೇಶಾದ್ಯಂತ ಹಾಗೂ ರಾಜ್ಯದಲ್ಲೂ ಬ್ಲಾಕ್ ಫಂಗಸ್ ನ ಅಬ್ಬರಕ್ಕೆ ಜನ ತತ್ತರಿಸಿಹೋಗಿದ್ದಾರೆ.. ರಾಜ್ಯದಲ್ಲಿ ಒಟ್ಟು 2856 ಮಂದಿಯಲ್ಲಿ ಈ ಸೋಂಕು ಕಾಣಿಸಿಕೊಂಡಿದ್ದು, ಈವರೆಗೂ 225 ಮಂದಿ ಮೃತಪಟ್ಟಿದ್ದಾರೆ. ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ರಾಜ್ಯದಲ್ಲಿ ಇದುವರೆಗೆ 191 ಮಂದಿ ಬ್ಲ್ಯಾಕ್ ಫಂಗಸ್ ನಿಂದ ಗುಣಮುಖಿತರಾಗಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಕೂಡ ಬ್ಲ್ಯಾಕ್ ಫಂಗಸ್ ಸೋಂಕಿತರ ಸಂಖ್ಯೆ ಸಾವಿರ ಗಡಿ ದಾಟಿದ್ದು, 959 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. 825 ಮಂದಿ ವಿವಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 49 ಮಂದಿ ಗುಣಮುಖಿತರಾಗಿದ್ದು, 72 ಮಂದಿ ಮೃತಪಟ್ಟಿದ್ದಾರೆ.








